ವಾಷಿಂಗ್ಟನ್: 2008 ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ (Mumbai Attack) ಭಾಗಿಯಾಗಿರುವ ತಹವ್ವುರ್ ರಾಣಾನನ್ನು (Tahawwur Rana) ಭಾರತಕ್ಕೆ (India) ಹಸ್ತಾಂತರಿಸಲು ಅಮೆರಿಕದ (America) ನ್ಯಾಯಾಲಯ ಅನುಮೋದನೆ ನೀಡಿದೆ.
10 ಪಾಕಿಸ್ತಾನಿ ಭಯೋತ್ಪಾದಕರು (Terrorists) 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, 6 ಅಮೆರಿಕನ್ನರು ಸೇರಿದಂತೆ 160 ಕ್ಕೂ ಹೆಚ್ಚು ಜನರನ್ನು ಕೊಂದಿದ್ದರು. ಈ ದಾಳಿಗೆ ಸಂಬಂಧಿಸಿದಂತೆ ಭಾರತದ ಕೋರಿಕೆಯ ಮೇರೆಗೆ ರಾಣಾನನ್ನು ಅಮೆರಿಕದಲ್ಲಿ ಬಂಧಿಸಲಾಯಿತು. ಆತನ ಹಸ್ತಾಂತರಕ್ಕಾಗಿ ಅಮೆರಿಕ ಸರ್ಕಾರಕ್ಕೆ ಭಾರತ ಮನವಿ ಮಾಡಿದ್ದು, ಇದೀಗ ನ್ಯಾಯಾಲಯ ಇದಕ್ಕೆ ಸಮ್ಮತಿ ನೀಡಿದೆ.
ಕೋರ್ಟ್ ವಿನಂತಿಯನ್ನು ಬೆಂಬಲಿಸಿ ಮತ್ತು ವಿರೋಧವಾಗಿ ಸಲ್ಲಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲಾಗಿದೆ. ವಿಚಾರಣೆಯಲ್ಲಿ ಪ್ರಸ್ತುತಪಡಿಸಿದ ವಾದಗಳನ್ನು ಪರಿಗಣಿಸಿದೆ ಎಂದು ಕ್ಯಾಲಿಫೋರ್ನಿಯ ಜಿಲ್ಲಾ ನ್ಯಾಯಾಧೀಶ ಜಾಕ್ವೆಲಿನ್ ಚೂಲ್ಜಿಯಾನ್ ಹೇಳಿದ್ದಾರೆ. ಮೇ 16 ರಂದು 48 ಪುಟಗಳ ನ್ಯಾಯಾಲಯದ ಆದೇಶವನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಒಂದು ಕರೆಗೆ ಕರಗಿದ ಕನಕಪುರದ ಬಂಡೆ – ತಡರಾತ್ರಿ ನಡೆದಿದ್ದು ಏನು?
ತಹವ್ವುರ್ ರಾಣಾ ಯಾರು?
ತಹವ್ವುರ್ ರಾಣಾ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ. ತನ್ನ ಬಾಲ್ಯದ ಗೆಳೆಯ ಡೇವಿಡ್ ಕೋಲ್ಮನ್ ಹೆಡ್ಲಿ, ದಾವೂದ್ ಗಿಲಾನಿ ಮತ್ತು ಇತರರಿಗೆ ಸಹಕರಿಸಿದ್ದಾನೆ. ಈ ಮೂಲಕ ಮುಂಬೈನಲ್ಲಿ ಲಷ್ಕರ್ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭಾಗವಹಿಸಿದ್ದಾನೆ ಎಂದು ಭಾರತ ಆರೋಪಿಸಿದೆ.
ಮುಂಬೈ ದಾಳಿ:
2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು. ಇದನ್ನೂ ಓದಿ: ಡಿಸಿಎಂ ಪಟ್ಟ ಸಿಗದೇ ಇದ್ರೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸ್ತೀವಿ: ಸಿದ್ದು ಮನೆ ಮುಂದೆ ಜಮೀರ್ ಅಭಿಮಾನಿ ಆಗ್ರಹ
ಛತ್ರಪತಿ ಶಿವಾಜಿ ಟರ್ಮಿನಸ್ (CST) ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.