ವಾಷಿಂಗ್ಟನ್: ಅಮೆರಿಕ ಸೇನಾ ದಾಳಿಗೆ ಹೆದರಿ ಇಸ್ಲಾಮಿಕ್ ಸ್ಟೇಟ್ ಅಫ್ ಇರಾಕ್ ಆಂಡ್ ಸಿರಿಯಾ (ಐಸಿಸ್) ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕರ್ ಅಲ್ ಬಾಗ್ದಾದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಮೆರಿಕಾ ಮಾಧ್ಯಮಗಳು ವರದಿ ಮಾಡಿವೆ.
ಈ ಹಿಂದೆಯಿಂದಲ್ಲೂ ಐಸಿಸ್ ಉಗ್ರ ಸಂಘಟನೆಯ ವಿರುದ್ಧ ಸಮರ ಸಾರಿದ್ದ ಅಮೆರಿಕಾ 2011 ಮೇ 2ರಂದು ಮೋಸ್ಟ್ ವಾಟೆಂಡ್ ಉಗ್ರ ಒಸಾಮಾ ಬಿನ್ ಲಾಡೆಮ್ ಅನ್ನು ಹೊಡೆದು ಹಾಕಿತ್ತು. ನಂತರ ಅಲ್ ಬಾಗ್ದಾದಿಯ ಹಿಂದೆ ಬಿದ್ದಿದ್ದ ಅಮೆರಿಕಾ ಇಂದು ಅವನು ಅಡಗಿ ಕುಳಿತ್ತಿದ ಜಾಗಕ್ಕೆ ಹೋಗಿದೆ. ಇದನ್ನು ಗಮನಿಸಿದ ಅಲ್ ಬಾಗ್ದಾದಿ ಆತ್ಮಾಹುತಿ ಬಾಂಬ್‍ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
Advertisement
Advertisement
ಈ ಹಿಂದೆಯೂ ಹಲವು ಬಾರಿ ಅಲ್ ಬಾಗ್ದಾದಿ ಸಾವನ್ನಪ್ಪಿದ್ದಾನೆ ಎಂದು ಸುದ್ದಿಯಾಗಿತ್ತು. ಆದರೆ ಆಗ ಆತ ಸಾವನ್ನಪ್ಪಿರಲಿಲ್ಲ. ಆದರೆ ಇಂದು ಖಚಿತವಾಗಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಈ ವಿಚಾರದ ಬಗ್ಗೆ ಅಮೆರಿಕಾ ಸೇನೆ ಯಾವುದೇ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ. ಆದರೆ ಸಿರಿಯಾದ ಇಡ್ಲಿಬ್ ಎಂಬ ಪ್ರದೇಶದ ಮೇಲೆ ದಾಳಿ ಮಾಡಿದ ಅಮೆರಿಕಾ ಸೇನೆಗೆ ಹೆದರಿ ಅಲ್ ಬಾಗ್ದಾದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
Advertisement
Something very big has just happened!
— Donald J. Trump (@realDonaldTrump) October 27, 2019
Advertisement
ಇದಕ್ಕೆ ಪುಷ್ಠಿಕೊಡುವಂತೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒಂದು ಟ್ವೀಟ್ ಮಾಡಿದ್ದಾರೆ. ತುಂಬಾ ದೊಡ್ಡದಾದ ಒಂದು ಕೆಲಸ ಈಗ ತಾನೇ ಆಗಿದೆ ಎಂದು ಟ್ರಂಪ್ ಬರೆದುಕೊಂಡಿರುವುದು ಈಗ ಚರ್ಚೆಗೆ ಕಾರಣವಾಗಿದೆ. ಆಲ್ ಬಾಗ್ದಾದಿ ಹತನಾದ ನಂತರವೇ ಟ್ರಂಪ್ ಹೀಗೆ ಬರೆದುಕೊಂಡಿದ್ದಾರೆ ಎಂದು ಸುದ್ದಿಯಾಗುತ್ತಿದೆ. ಸದ್ಯ ಟ್ರಂಪ್ ಅವರು ಇಂದು ಸಂಜೆ ಅಮೆರಿಕಾದ ಶ್ವೇತಭವನದಲ್ಲಿ ಮಾತನಾಡಲಿದ್ದು, ಈ ವಿಚಾರದ ಬಗ್ಗೆಯೇ ಮಾತನಾಡಬಹುದು ಎಂಬ ಕುತೂಹಲ ಹೆಚ್ಚಾಗಿದೆ.
48 ವರ್ಷದ ಅಬು ಬಕರ್ ಅಲ್ ಬಾಗ್ದಾದಿ ಇರಾಕ್ ನಿವಾಸಿಯಾಗಿದ್ದು, ತನ್ನದೇಯಾದ ಉಗ್ರ ಸಂಘಟನೆಯನ್ನು ಕಟ್ಟಿಕೊಂಡು ಹಿಂಸಾತ್ಮಕ ಭಯೋತ್ಪಾದನೆಯನ್ನು ಆರಂಭ ಮಾಡಿದ್ದ. ಈತ 2014 ರಲ್ಲಿ ಸಿರಿಯಾ ಮತ್ತು ಇರಾಕ್‍ನಲ್ಲಿ ಒಂದು ಪ್ರದೇಶವನ್ನು ಆಕ್ರಮಣ ಮಾಡಿಕೊಂಡು ಅಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಆರಂಭಿಸಿ ಸಾವಿರಾರು ಜನರ ಸಾವಿಗೆ ಕಾರಣನಾಗಿದ್ದ. ಇದರ ಜೊತೆಗೆ ಹಲವರ ಶಿರಚ್ಛೇದನ ಮಾಡಿದ್ದ.