ವಾಷಿಂಗ್ಟನ್: ಅಮೆರಿಕ (America) ಹೌಸ್ ಆಫ್ ಸ್ಪೀಕರ್ ನ್ಯಾನ್ಸಿ ಪೆಲೋಸಿ (Nancy Pelosi) ಅವರ ಪತಿ ಪೌಲ್ ಪೆಲೋಸಿ (Paul Pelosi) ಅವರ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ (Assault) ನಡೆಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ವರದಿಯಾಗಿದೆ.
ಶುಕ್ರವಾರ ಮುಂಜಾನೆ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಪಾಲ್ ಅವರ ಮನೆಗೆ ಕೆಲ ದುಷ್ಕರ್ಮಿಗಳು ನುಗ್ಗಿದ್ದು, ಅವರ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಏರಿಕೆ – ಚೀನಾದಲ್ಲಿ ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿ
ದಾಳಿಕೋರನು ಮನೆಗೆ ನುಗ್ಗಿದ್ದ ಸಂದರ್ಭ ನ್ಯಾನ್ಸಿ ಮನೆಯಲ್ಲಿರಲಿಲ್ಲ. ಇದೀಗ ಹಲ್ಲೆ ನಡೆಸಿದಾತನನ್ನು ಅಧಿಕಾರಿಗಳು ಬಂಧಿಸಿದ್ದು, ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಣ್ಣ ಫ್ಲಾಟ್‌ನಲ್ಲಿ ಇರ್ತಾರಂತೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್