Connect with us

Latest

ಅಮೇಥಿ ರಾಹುಲ್ ಗಾಂಧಿಯನ್ನ ದೂರ ಓಡಿಸಿತು: ಸ್ಮೃತಿ ಇರಾನಿ ವ್ಯಂಗ್ಯ

Published

on

– ಪದೇ ಪದೇ ಸೋತರೂ ಗೆಲ್ಲುವ ನಿರೀಕ್ಷೆ ಏಕೆ: ಕಾಂಗ್ರೆಸ್ ತಿರುಗೇಟು

ಲಕ್ನೋ: ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಅಮೇಥಿ ಕ್ಷೇತ್ರದ ಜನತೆ ನಿರಾಕರಿಸಿದ್ದಾರೆ. ಹೀಗಾಗಿ ಕ್ಷೇತ್ರದಿಂದ ಓಡಿ ಹೋಗುತ್ತಿದ್ದಾರೆ. ದಕ್ಷಿಣ ಭಾರತದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್‍ನ ನಾಯಕರಿಗೆ ಕರೆ ಬಂದಿದೆ ಅಂತ ಕಾಂಗ್ರೆಸ್ ತಿಳಿಸುತ್ತಿದೆ ಎಂದು ಸ್ಮೃತಿ ಇರಾನಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.

ಸ್ಮೃತಿ ಇರಾನಿ ಅವರಿಗೆ ತಿರುಗೇಟು ನೀಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ಚಾಂದನಿ ಚೌಕ್ ಕ್ಷೇತ್ರದಲ್ಲಿ ಸೋತರೂ, ಅಮೇಥಿಯಲ್ಲಿ ಪರಾಜಿತಗೊಂಡು ಓಡಿ ಹೋದರೂ ಸ್ಮೃತಿ ಇರಾನಿ ಅವರು ಸ್ಪರ್ದೆ ಮಾಡುತ್ತಿದ್ದಾರೆ. ಕ್ಷೇತ್ರದ ಮತದಾರರು ಅವರನ್ನು ತಿರಸ್ಕರಿಸಿದ್ದಾರೆ. ಈ ಬಾರಿಯ ಸ್ಪರ್ಧೆಯ ಮೂಲಕ ಹ್ಯಾಟ್ರಿಕ್ ಸೋಲನ್ನು ಅನುಭವಿಸಲಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆಯ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಸುರ್ಜೇವಾಲಾ ಅವರು, ಅಮೇಥಿ ನನ್ನ ಕರ್ಮಭೂಮಿ. ನಾನು ಎಂದೆಂದಿಗೂ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ರಾಹುಲ್ ಗಾಂಧಿ ಯಾವಾಗಲೂ ಹೇಳುತ್ತಾರೆ. ಆದರೆ ಕೇರಳದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ರಾಹುಲ್ ಗಾಂಧಿ ಅವರನ್ನು ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನು ರಾಹುಲ್ ಗಾಂಧಿ ಅವರು ಸಕಾರಾತ್ಮಕವಾಗಿ ಪರಿಗಣಿಸಲಿದ್ದಾರೆ’ ಎಂದು ತಿಳಿಸಿದ್ದರು.

2014ರ ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಇರಾನಿ, ರಾಹುಲ್ ಗಾಂಧಿ ವಿರುದ್ಧ ಸುಮಾರು 1 ಲಕ್ಷ ಮತಗಳ ಅಂತರದಿಂದ ಪರಾಜಿತಗೊಂಡಿದ್ದರು. ಆದರೆ ಉತ್ತರ ಪ್ರದೇಶದ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಸರ್ಕಾರ ರಚಿಸಿದೆ. ಇತ್ತ ಅಮೇಥಿ ಲೋಕಸಭಾ ವ್ಯಾಪ್ತಿಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಜಯಗಳಿಸಿದೆ. ಈ ಎಲ್ಲ ಬೆಳವಣಿಗೆಯಿಂದಾಗಿ ಸ್ಮೃತಿ ಇರಾನಿ ಅವರು ಈ ಬಾರಿ ಗೆಲ್ಲುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಹೀಗಾಗಿ ರಾಹುಲ್ ಗಾಂಧಿ ಅವರು ಅಮೇಥಿ ಜೊತೆಗೆ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗುತ್ತಿದ್ದಾರೆ ಎನ್ನುವ ವಿಚಾರ ಚರ್ಚೆಯಾಗುತ್ತಿದೆ.

Click to comment

Leave a Reply

Your email address will not be published. Required fields are marked *