ನವದೆಹಲಿ: ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮವಾದ ಟ್ವಿಟ್ಟರ್‌ನಲ್ಲಿನ ಕೆಲವು ಅಂಶಗಳನ್ನು ತೆಗದುಹಾಕುವಂತೆ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಟ್ವಿಟ್ಟರ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ.
24 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಲ ದಿನಗಳಿಂದ ಈಚೆಗೆ ಕಾನೂನು ಸಮರ ನಡೆಯುತ್ತಿದೆ. ಈ ನಡುವೆ ಅಧಿಕಾರಿಗಳಿಂದಲೇ ಟ್ವಿಟ್ಟರ್ ದುಬಳಕೆಯಾಗುತ್ತಿರುವುದಾಗಿ ಟ್ವಿಟ್ಟರ್ ಆರೋಪಿಸಿದೆ. ಕೇಂದ್ರ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯ ಹೈಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: ಬಂಡಿ ಎಳೆಯುವವನಿಗೆ ಹೊಸ ಚಪ್ಪಲಿ ಗಿಫ್ಟ್ ಕೊಟ್ಟ ಪೊಲೀಸ್ – ವೀಡಿಯೋ ನೋಡಿ ನೆಟ್ಟಿಗರು ಫುಲ್ ಖುಷ್
Advertisement
Advertisement
ನ್ಯಾಯಾಂಗ ಪರಾಮರ್ಶೆಯ ಮೂಲಕ ಟ್ವಿಟ್ಟರ್ ನೆರವು ಪಡೆಯಲು ಅಮೆರಿಕ ಮೂಲದ ಸಾಮಾಜಿಕ ಮಾಧ್ಯಮ ಕಂಪೆನಿ ಪ್ರಯತ್ನ ನಡೆಸುತ್ತಿದೆ. ಸರ್ಕಾರದ ಆದೇಶಗಳ ಕಾನೂನು ಮಾನ್ಯತೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಇದನ್ನೂ ಓದಿ: ಗೆಳತಿಯೊಂದಿಗೆ ಸೆಕ್ಸ್ ಮಾಡ್ತಿದ್ದಾಗಲೇ ಹೃದಯಾಘಾತ – ಹಸೆಮಣೆ ಏರಬೇಕಿದ್ದ 28ರ ಯುವಕ ಸಾವು!
Advertisement
ಕೇಂದ್ರಸರ್ಕಾರವು ಸ್ವತಂತ್ರ ಸಿಖ್ ದೇಶವನ್ನು ಬೆಂಬಲಿಸುವ ಖಾತೆಗಳು, ರೈತರ ಪ್ರತಿಭಟನೆ ಕುರಿತಾಗಿ ಸುಳ್ಳು ಮಾಹಿತಿ ಹರಡುವ ಪೋಸ್ಟ್‌ಗಳು ಹಾಗೂ ಕೋವಿಡ್ 19 ಸಾಂಕ್ರಾಮಿಕವನ್ನು ಸರ್ಕಾರ ನಿರ್ವಹಣೆ ಮಾಡಿರುವ ರೀತಿಯನ್ನು ಟೀಕಿಸುವ ಟ್ವೀಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಳೆದ ಒಂದು ವರ್ಷದಿಂದ ಒತ್ತಡ ಹೇರುತ್ತಲೇ ಇದೆ. ಕೇಂದ್ರ ಸರ್ಕಾರದ ಆದೇಶದಿಂದ ವಿನಾಯಿತಿ ಪಡೆಯಲು ಟ್ವಿಟ್ಟರ್ ಕೋರ್ಟ್ ಮೊರೆ ಹೋಗಿದೆ.
Advertisement
ಐಟಿ ಸಚಿವಾಲಯವು ಕೆಲವು ಆದೇಶಗಳನ್ನು ಸರಿಯಾಗಿ ಪಾಲಿಸದೆ ಇದ್ದರೆ ಕ್ರಿಮಿನಲ್ ಪ್ರಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಕಳೆದ ತಿಂಗಳು ಟ್ವಿಟ್ಟರ್‌ಗೆ ಎಚ್ಚರಿಕೆ ನೀಡಿತ್ತು. ಆದರೆ ಭಾರತದ ಐಟಿ ಕಾಯ್ದೆಯ ಪ್ರಕ್ರಿಯಾ ಅಗತ್ಯಗಳಿಗೆ ಒಳಪಡದ ಕಾರಣ ಕೆಲವು ಆದೇಶಗಳು ನ್ಯಾಯಾಂಗದ ಪರಾಮರ್ಶೆಗೆ ಒಳಪಡಬೇಕು ಎಂದು ಟ್ವಿಟ್ಟರ್ ವಾದಿಸಿತು. ಅಲ್ಲದೆ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿ ಹಾಗೂ ಇತರೆ ಕಾರಣಗಳಿಂದ ಕೆಲವು ಅಂಶಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕನ್ನು ಸರ್ಕಾರಕ್ಕೆ ಐಟಿ ಕಾಯ್ದೆ ಒದಗಿಸಿದೆ. ಕೆಲವು ಆದೇಶಗಳು ಆ ಬರಹದ ಬರಹಗಾರರಿಗೆ ನೋಟಿಸ್‌ಗಳನ್ನು ನೀಡಲು ವಿಫಲವಾಗಿವೆ ಎಂದು ಟ್ವಿಟ್ಟರ್ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ.
ದೇಶದಲ್ಲಿ 24 ಮಿಲಿಯನ್ ಟ್ವಿಟ್ಟರ್ ಬಳಕೆದಾರರಿದ್ದಾರೆ. ಕೆಲವು ರಾಜಕೀಯ ವಿಷಯಗಳು ರಾಜಕೀಯ ಪಕ್ಷಗಳ ಅಧಿಕೃತ ಖಾತೆಗಳಿಂದ ಪೋಸ್ಟ್ ಆಗಿರುವುದಕ್ಕೆ ಸಂಬಂಧಿಸಿವೆ. ಇವುಗಳನ್ನು ಬ್ಲಾಕ್ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಉಲ್ಲಂಘಿಸಿದಂತೆ ಆಗುತ್ತದೆ ಎಂದು ಟ್ವಿಟ್ಟರ್ ಹೇಳಿದೆ.