Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ 3,622 ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ 3,622 ಏರಿಕೆ

Latest

ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ 3,622 ಏರಿಕೆ

Public TV
Last updated: May 28, 2024 7:40 am
Public TV
Share
1 Min Read
Amid Intense Heatwave Number Of Heatstroke Patient In Rajasthan 3622
SHARE

ಜೈಪುರ್: ರಾಜಸ್ಥಾನದಲ್ಲಿ (Rajasthan) ಹೀಟ್ ಸ್ಟ್ರೋಕ್‍ನಿಂದ (Heatstroke) ಬಳಲುತ್ತಿರುವವರ ಸಂಖ್ಯೆ ಸೋಮವಾರ 2,809 ರಿಂದ 3,622ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ತೀವ್ರವಾದ ಶಾಖದ ಅಲೆಯ (Heatwave) ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯಾಗಿದೆ.

ಸೋಮವಾರ (ಮೇ 27) ರಾಜ್ಯದ ಫಲೋಡಿಯಲ್ಲಿ 49.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 6.3 ಡಿಗ್ರಿ ಹೆಚ್ಚಳವಾಗಿದೆ. ಜೈಪುರದಲ್ಲಿ (Jaipur) ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಭಾನುವಾರಕ್ಕಿಂತ 0.8 ಡಿಗ್ರಿ ಹೆಚ್ಚಾಗಿದೆ. ಕೋಟಾದಲ್ಲಿ ಗರಿಷ್ಠ ತಾಪಮಾನ 48.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ 5 ಡಿಗ್ರಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಸ್ತೆ ದಾಟುವಾಗ ಕಾರು ಡಿಕ್ಕಿ – ಅಮೆರಿಕದಲ್ಲಿ ತೆಲಂಗಾಣ ಮೂಲದ ಯುವತಿ ಸಾವು

ರಾಜ್ಯದ ಬಹುತೇಕ ಎಲ್ಲಾ ನಗರಗಳು 45 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿವೆ. ಅಜ್ಮೀರ್‍ನಲ್ಲಿ ಗರಿಷ್ಠ ತಾಪಮಾನ 46.3 ಡಿಗ್ರಿ ಸೆಲ್ಸಿಯಸ್, ಭಿಲ್ವಾರ್ (47.4), ಭರತ್‍ಪುರ (48.2), ಅಲ್ವಾರ್ (46.2), ಪಿಲಾನಿ (48.5), ಚಿತ್ತೋರ್‍ಗಢ (47), ಬಾರ್ಮರ್ (49.3), ಜೈಸಲ್ಮೇರ್ (48.7), ಜೋಧ್‍ಪುರ (47.4), ಬಿಕಾನೇರ್ (48.2), ಚುರು (48), ಶ್ರೀ ಗಂಗಾನಗರ (48.3), ಮತ್ತು ಧೋಲ್‍ಪುರದಲ್ಲಿ 48.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಅಲ್ಲದೇ ಇಂದು ಸಹ (ಮೇ 28 ರಂದು) ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ತೀವ್ರತರವಾದ ಬಿಸಿಗಾಳಿ ಪರಿಸ್ಥಿತಿಯು ಮುಂದಿನ 2-3 ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಮೇ 29ರಿಂದ ತಾಪಮಾನ ಕಡಿಮೆಯಾಗಲು ಆರಂಭವಾಗಲಿದ್ದು, ಜೂನ್ ಮೊದಲ ವಾರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಸ್ಥಿತಿಯಲ್ಲಿರಲಿದೆ ಎಂದು ಜೈಪುರ್‌ನ ಹವಾಮಾನ ಇಲಾಖೆಯ (Meteorological Department) ನಿರ್ದೇಶಕ ಆರ್.ಎಸ್. ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು

TAGGED:heatstrokeHeatwaveJaipurMeteorological Departmentrajasthanರಾಜಸ್ಥಾನ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Germany Gurdwara
Latest

ಜರ್ಮನಿಯ ಗುರುದ್ವಾರದಲ್ಲಿ ಬಂದೂಕು, ಕಿರ್ಪಾನ್‌, ಪೆಪ್ಪರ್‌ ಸ್ಪ್ರೇ ಹಿಡಿದು ಘರ್ಷಣೆ – 11 ಮಂದಿಗೆ ಗಾಯ

Public TV
By Public TV
20 minutes ago
Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
30 minutes ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
56 minutes ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
1 hour ago
Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
10 hours ago
CEASEFIRE New
Latest

ಮಾತಾಡಿದ್ರೆ ಬಗೆಹರಿಯದೇ ಇರೋದೇನಿದೆ? – ಜಗತ್ತಿನ ಪ್ರಮುಖ ಕದನ ವಿರಾಮಗಳು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?