ವಾಷಿಂಗ್ಟನ್: ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಕಾಣಿಸಿಕೊಂಡಿರುವ ಮಂಕಿಪಾಕ್ಸ್ ಲೈಂಗಿಕ ಸಂಪರ್ಕದಿಂದಲೂ ಹರಡುತ್ತದೆ ಎಂಬ ಆಘಾತಕಾರಿ ಅಂಶವನ್ನು ಸಂಶೋಧಕರು ಹೊರ ಹಾಕಿದ್ದಾರೆ. ನಿಕಟ ದೈಹಿಕ ಸಂಪರ್ಕದ ಮೂಲಕ ಹರಡುತ್ತವೆ ಎಂಬುದನ್ನು ಹಲವು ವರದಿಗಳು ಹೇಳಿವೆ.
ಈ ನಡುವೆ ಅಚ್ಚರಿಯ ಸಂಶೋಧನಾ ಮಾಹಿತಿ ಹೊರಬಿದ್ದಿದ್ದು, ಈ ಕುರಿತು, ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಾತನಾಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯು ಸೆಕ್ಸ್ಗೆ ಪ್ರಭಾವಿತರಾದ ಗುಂಪನ್ನು ಕರೆದಿದ್ದು, ಪುರುಷ-ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸುವವರು ತಮ್ಮ ಲೈಂಗಿಕ ಪಾಲುದಾರರ ಸಂಖ್ಯೆಯನ್ನು ಮಿತಿಗೊಳಿಸಬೇಕು ಎಂದು ಹೇಳಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- ಬಂಧಿತ ಕೆಲಸ ಮಾಡುತ್ತಿದೆ ಅಂಗಡಿಗೆ ಮುತ್ತಿಗೆ
ಕಳೆದವಾರ ಮಂಕಿಪಾಕ್ಸ್ ಪ್ರಕರಣ ಹೆಚ್ಚಿದ ಸಂಖ್ಯೆಯಿಂದಾಗಿ ಜಾಗತೀಕ ತುರ್ತುಪರಿಸ್ಥಿತಿ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಲಿಂಗಿಗಳು ತಮ್ಮ ಲೈಂಗಿಕ ಪಾಲುದಾರರ ಸಂಖ್ಯೆಯನ್ನು ಕಡಿಮೆ ಮಾಡುವುದು, ಹೊಸ ಪಾಲುದಾರರೊಂದಿಗೆ ಲೈಂಗಿಕತೆ ಮರು ಪರಿಶೀಲಿಸುವುದು ಮೊದಲಾದ ಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮುಗೆ ರಾಷ್ಟ್ರಪತ್ನಿ ಎಂದಿದ್ದಕ್ಕೆ ಕ್ಷಮೆ ಕೋರಿದ ಅಧೀರ್ ರಂಜನ್ ಚೌಧರಿ
ನಿನ್ನೆವರೆಗೆ 78 ದೇಶಗಳಲ್ಲಿ 18 ಸಾವಿರ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಶೇ.25 ರಷ್ಟು ಅಮೆರಿಕದಲ್ಲಿ ವರದಿಯಾಗಿದ್ದರೆ ಉಳಿದ ಶೇ.75 ರಷ್ಟು ಪ್ರಕರಣಗಳು ಯುರೋಪಿಯನ್ ದೇಶಗಳಲ್ಲಿ ಕಾಣಿಸಿಕೊಂಡಿವೆ. ಕಳೆದ ಮೇ ತಿಂಗಳಿನಿಂದ 5 ಮರಣ ಪ್ರಕರಣಗಳು ವರದಿಯಾಗಿವೆ. ಈ ಬೆನ್ನಲ್ಲೇ ಶೇ.98 ರಷ್ಟು ಮಂಕಿಪಾಕ್ಸ್ ಸಲಿಂಗಿಗಳ ಲೈಂಗಿಕ ಕ್ರಿಯೆಯಿಂದಲೇ ಹರಡುತ್ತಿದೆ ಎಂಬ ಅಂಶ ಹೊರಬಿದ್ದಿದೆ. ಇಂಗ್ಲೆಂಡ್‌ನ ಜರ್ನಲ್ ಆಫ್ ಮಡಿಸನ್ ಈ ಅಂಶವನ್ನು ಪ್ರಕಟಿಸಿದೆ.
ಅದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆಯು ಲೈಂಗಿಕವಾಗಿ ಹರಡುವ ಸೋಂಕುಗಳ ಜಾಗೃತಿ ಕಾರ್ಯಕ್ರಮದ ಅಡಿಯಲ್ಲಿ ಸಲಿಂಗಿಗಳು ತಮ್ಮ ಲೈಂಗಿಕ ಪಾಲುದಾರರ ಸಂಖ್ಯೆಯನ್ನು ಕಡಿಮೆ ಮಾಡಿಕೊಳ್ಳುವಂತೆ ಅವರಿಗೆ ಸಂದೇಶಗಳನ್ನು ತಿಳಿಸಲಾಗುತ್ತಿದೆ ಎಂದು ವರದಿಯಾಗಿದೆ.