ಉತ್ತರ ಪ್ರದೇಶದಲ್ಲಿ ರಣ ಬಿಸಿಲಿಗೆ ನಲುಗಿದ ಸರ್ಕಾರ – ಇಂದು ಹೈವೋಲ್ಟೇಜ್‌ ಸಭೆ

Public TV
2 Min Read
weather

ಲಕ್ನೋ: ರಣ ಬಿಸಿಲಿನ ತಾಪದಿಂದ (High Temperature) ಬಳಲುತ್ತಿರುವ ಉತ್ತರ ಪ್ರದೇಶದಲ್ಲಿ (Uttar Pradesh) ಮಂಗಳವಾರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ (Mansukh Mandaviya) ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ರಾಜ್ಯವು ಶಾಖದ ಅಲೆಗೆ ನಲುಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ಹೌದು. ಉತ್ತರ ಪ್ರದೇಶ, ಬಿಹಾರ, ತಮಿಳುನಾಡು, ಮಧ್ಯಪ್ರದೇಶ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಖದ ಅಲೆಗೆ ಸಾವು ನೋವುಗಳು ವರದಿಯಾಗಿವೆ.

weather (1)

UP ನಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ 54 ಮಂದಿ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಹಠಾತ್ ಸಾವುಗಳು, ಜ್ವರ, ಉಸಿರಾಟದ ತೊಂದರೆ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳು ಭರ್ತಿಯಾಗುತ್ತಿವೆ. ಬಿಹಾರದಲ್ಲೂ 44 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಉರಿಯುವ ಬಿಸಿಲಿಗೆ 54 ಮಂದಿ ಬಲಿ, 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಈಗಾಗಲೇ ಕೆಲವು ರಾಜ್ಯಗಳು ಬಿಸಿಲಿನ ತಾಪಮಾನದಿಂದ ಮಕ್ಕಳನ್ನು ರಕ್ಷಿಸಲು ಉದ್ದೇಶದಿಂದ ಬೇಸಿಗೆ ರಜೆ ವಿಸ್ತರಣೆ ಮಾಡಿವೆ.

ಭಾರತೀಯ ಹವಾಮಾನ ಇಲಾಖೆ ಏಪ್ರಿಲ್‌ನಿಂದ ಜೂನ್‌ವರೆಗೆ ಭಾರತದಲ್ಲಿ ತಾಪಮಾನ ಹೆಚ್ಚಾಗಿರಲಿದೆ ಎಂದು ಹೇಳಿತ್ತು. ಅದಂತೆಯೇ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಣಬಿಸಿಲು ಜನರನ್ನ ಸುಡುತ್ತಿದೆ. ಈ ಪ್ರದೇಶಗಳಿಗೆ ಹಮಾವಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಇದನ್ನೂ ಓದಿ: ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

UP 2

ಸದ್ಯ ಉತ್ತರ ಪ್ರದೇಶದಲ್ಲಿ ಅತಿಯಾದ ಬಿಸಿಲಿನ ತಾಪದಿಂದ ಬೇರೆ ಯಾವುದಾರೂ ರೋಗಗಳು ಕಾಣಿಸಿಕೊಂಡಿದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳ ತಂಡ ನೇಮಿಸಿದೆ. ಏಕೆಂದರೆ ಅತಿಯಾದ ಬಿಸಿಲಿನ ತಾಪಮಾನ ಹಾಗೂ ಶೀತ ವಾತಾವರಣ ಮಧುಮೇಹ, ರಕ್ತದೊತ್ತಡ ಹಾಗೂ ಉಸಿರಾಟ ಸಮಸ್ಯೆ ಹೊಂದಿರುವವರಿಗೆ ಇನ್ನಷ್ಟು ಅಪಾಯ ಉಂಟು ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

Share This Article