Sunday, 22nd July 2018

Recent News

ಮದ್ವೆಗೆ ಬಂದ 8ರ ಬಾಲಕಿಯನ್ನು ಎಳೆದುಕೊಂಡು ಹೋಗಿ ರೇಪ್ ಮಾಡಿ ಕೊಲೆಗೈದ!

ಲಕ್ನೋ: ಜಮ್ಮು-ಕಾಶ್ಮೀರದ ಕಥುವಾದಲ್ಲಿ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ತೀವ್ರ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಇದೀಗ ಉತ್ತರ ಪ್ರದೇಶದಲ್ಲಿ 8 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಈ ಘಟನೆ ಉತ್ತರಪ್ರದೇಶದ ಈಟಾ ಜಿಲ್ಲೆಯ ಗ್ರಾಮವೊಂದರಲ್ಲಿ ಸೋಮವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ. ಬಾಲಕಿ ತನ್ನ ಪೋಷಕರ ಜೊತೆ ಗ್ರಾಮದ ಮದುವೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದಳು. ಈ ವೇಳೆ ಅಲ್ಲಿ ಅದೇ ಗ್ರಾಮದ 18 ವರ್ಷದ ಯುವಕನೋರ್ವ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.

ಕುಡಿದ ಮತ್ತಿನಲ್ಲಿದ್ದ ಆರೋಪಿ ಬಾಲಕಿಯ ಶವದ ಪಕ್ಕದಲ್ಲೇ ಬಿದ್ದಿದ್ದನು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಸುಲಭವಾಗಿ ಕಂಡುಹಿಡಿಯಲಾಗಿದೆ. ಈ ಘಟನೆ ಮಧ್ಯರಾತ್ರಿ 1.30ರ ಸುಮಾರಿಗೆ ನಡೆದಿರುವುದಾಗಿ ರಾಷ್ಟ್ರೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಕುಡಿದ ಮತ್ತಿನಲ್ಲಿ ಆರೋಪಿ ಸೋನು, ಬಾಲಕಿಯನ್ನು ನೋಡಿ ಆಕರ್ಷಿತನಾಗಿದ್ದಾನೆ. ಬಳಿಕ ಆಕೆಯನ್ನು ನಿರ್ಮಾಣ ಹಂತದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯ ಕುತ್ತಿಗೆಯನ್ನು ಹಿಸುಕಿ ಕೊಲೆ ಮಾಡಿದ್ದಾನೆ. ಕೆಲ ಸಮಯದ ಬಳಿಕ ಬಾಲಕಿ ಕಾಣದಿದ್ದಾಗ ನೆರೆದಿದ್ದವರೆಲ್ಲ ಹುಡುಕಲು ಆರಂಭಿಸಿದ್ದಾರೆ. ಈ ವೇಳೆ ಬಾಲಕಿ ಕೊಲೆಯಾಗಿ ಹೋಗಿದ್ದಳು. ಅಲ್ಲದೇ ಆಕೆಯ ಶವದ ಪಕ್ಕದಲ್ಲೇ ಕುಡುಕನೊಬ್ಬ ಬಿದ್ದರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆತನೇ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆಂದು ಶಂಕೆ ವ್ಯಕ್ತವಾಗಿತ್ತು.

ನಾವು ವಧುವಿನ ಹತ್ತಿರದ ಸಂಬಂಧಿಕರಾಗಿದ್ದರಿಂದ ಮದುವೆ ಮನೆಯಲ್ಲಿ ಬ್ಯುಸಿಯಾಗಿದ್ದೆವು. ಹೀಗಾಗಿ ನಾವು ಬಾಲಕಿಯ ಕಡೆ ಗಮನಹರಿಸಿಲ್ಲ. ಈ ಸಮಯವನ್ನೇ ಉಪಯೋಗಿಸಿಕೊಂಡ ಆರೋಪಿ ರಾತ್ರಿ 1.30ರ ವೇಳೆಗೆ ಯಾರಿಗೂ ತಿಳಿಯದಂತೆ ಬಾಲಕಿಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಅಂತ ಮೃತ ಬಾಲಕಿಯ ತಂದೆ ಹೇಳಿದ್ದಾರೆ.

ಸೋನು ಮದುವೆ ಇನ್ನಿತರ ಶುಭಕಾರ್ಯಗಳಿಗೆ ಡೆಕೋರೇಷನ್ ಮಾಡುತ್ತಿದ್ದನು. ಸದ್ಯ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಅಂತ ಪೊಲೀಸ್ ಅಧಿಕಾರಿ ಚೌರಾಸಿಯಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *