ಇಸ್ಲಾಮಾಬಾದ್: ಏಕದಿನ ಏಷ್ಯಾಕಪ್ 2023ರ (ODI AisaCup) ಟೂರ್ನಿಗೆ ಭಾರತ ತಂಡ (Team India) ಪಾಲ್ಗೊಳ್ಳುವ ವಿಚಾರದಲ್ಲಿ ಕೊನೆಗೂ ಭಾರತದ ಎದುರು ಪಾಕಿಸ್ತಾನ (Pakistan) ಮಂಡಿಯೂರಿದೆ.
ಪಾಕಿಸ್ತಾನವು ಆತಿಥೇಯ ದೇಶಗಳೊಂದಿಗೆ ತವರಿನಲ್ಲಿ ಹಾಗೂ ಭಾರತ ಪ್ರತಿಸ್ಪರ್ಧಿ ದೇಶಗಳೊಂದಿಗೆ ಆಡುವಾಗ ತಟಸ್ಥ ಸ್ಥಳದಲ್ಲಿ ಆಡಬಹುದು ಎಂದು ಹೇಳಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ನಜಮ್ ಸೇಥಿ (Najam Sethi) ಶುಕ್ರವಾರ ಈ ವಿಷಯವನ್ನು ಬೋರ್ಡ್‌ನಲ್ಲಿ ಪ್ರಸ್ತಾಪಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ICC) ಪ್ರಸ್ತಾವನೆ ಕಳುಹಿಸಿದ್ದಾರೆ. ಇದನ್ನೂ ಓದಿ: ಲೀಗ್ ಹಂತದಲ್ಲೇ ಹಲವು ಸಮಸ್ಯೆ – ಈ ಸಲ ಕಪ್ ಗೆಲ್ಲುತ್ತಾ RCB?
Advertisement
Advertisement
ಸೆಪ್ಟೆಂಬರ್ 2 ರಿಂದ 17ರ ವರೆಗೆ ನಡೆಯಲಿರುವ ಏಕದಿನ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಅಫ್ಘಾನಿಸ್ತಾನ, ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಸೇರಿ 6 ದೇಶಗಳು ಸ್ಪರ್ಧಿಸಲಿವೆ. ಭಾರತ ತಟಸ್ಥ ಸ್ಥಳದಲ್ಲಿ ಆಡುವ ಕುರಿತು ಐಸಿಸಿ ನಿರ್ಧಾರ ಪ್ರಕಟಿಸಿದ ಬಳಿಕ ಪಂದ್ಯಗಳ ನಿರ್ಣಾಯಕ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಪಿಸಿಬಿ ಹೇಳಿದೆ. ಇದನ್ನೂ ಓದಿ: ಕೊಹ್ಲಿ ಮತ್ತೆ ನಾಯಕನಾಗಲು ಇದೇ ಕಾರಣ – ನೋವಿನಲ್ಲೂ RCB ತಂಡಕ್ಕಾಗಿ ಅಬ್ಬರಿಸಿದ ಡುಪ್ಲೆಸಿಸ್
Advertisement
Advertisement
ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ ಅವರು ಮೇ 4 ಹಾಗೂ 5 ರಂದು ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಮೇ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ನಿರ್ವಹಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈ ಮಹತ್ವದ ಬೆಳವಣಿಗೆಯಿಂದ ಮುಂದೆ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಪಾಕಿಸ್ತಾನದಲ್ಲಿ ಆಡುವ ಸಾಧ್ಯತೆಯಿದೆ. ಅದಕ್ಕಾಗಿ ಏಷ್ಯಾಕಪ್ ಅನ್ನು ತಟಸ್ಥ ಸ್ಥಳದಲ್ಲಿ ಆಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಭಾರತವು ತನ್ನ ದೇಶದಲ್ಲಿ ಕ್ರಿಕೆಟ್ ಆಡಬೇಕೆಂದು ಇಲ್ಲಿನ ಜನ ಬಯಸಿದ್ದಾರೆ. ನಮ್ಮ ಸರ್ಕಾರವೂ ಭಾರತದ ವಿರುದ್ಧ ಆಡಲು ಯಾವುದೇ ನಿರ್ಬಂಧ ವಿಧಿಸಿಲ್ಲ. ನಾವು ಭಾರತದೊಂದಿಗೆ ಗೌರವಯುತವಾಗಿ ಕ್ರಿಕೆಟ್ ಆಡಲು ಬಯಸುತ್ತೇವೆ. ಇದರಿಂದ ಪಾಕಿಸ್ತಾನದ ಆರ್ಥಿಕತೆಯೂ ಅಭಿವೃದ್ಧಿಯಾಗುತ್ತದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ನಜಮ್ ಸೇಥಿ ತಿಳಿಸಿದ್ದಾರೆ.
ಏಕದಿನ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡ ತಟಸ್ಥ ಸ್ಥಳದಲ್ಲಿ ಆಡುವ ಬಗ್ಗೆ ಬಿಸಿಸಿಐ ಆಗಲಿ, ಐಸಿಸಿ ಆಗಲಿ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ: ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಟಿ20 ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್‌ನಲ್ಲಿ ಇತ್ತಂಡಗಳು ಭಾಗಿಯಾಗಿದ್ದವು. ನಂತರ ಏಷ್ಯಾಕಪ್ ಆಡಲು ಭಾರತ ತಂಡವನ್ನು ತನ್ನ ದೇಶಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಮನವಿಯನ್ನು ನಿರಾಕರಿಸಿದ್ದರು.