ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಆದ್ರೆ ಕ್ಷುಲ್ಲಕ ವಿಚಾರಕ್ಕಾಗಿ ಜಾನುವಾರುಗಳಿಗೆ ತಂದಿದ್ದ ಹುಲ್ಲಿನ ಲಾರಿಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ.
ಬರ ನೀಗಿಸಲು ಆಂಧ್ರದಿಂದ ಹುಲ್ಲು ತುಂಬಿಸಿಕೊಂಡು ಬರುತ್ತಿದ್ದ ಲಾರಿ ಟಾಟಾ ಏಸ್ ವಾಹನವೊಂದಕ್ಕೆ ಸ್ಪರ್ಶಿಸಿದೆ. ಇದನ್ನೇ ನೆಪವಾಗಿಟ್ಟುಕೊಂಡು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ. .
ಕಿಡಿಗೇಡಿಗಳ ಈ ಕೃತ್ಯದಿಂದ ಬರಗಾಲದಲ್ಲಿ ನೂರಾರು ಜಾನುವಾರುಗಳ ಆಹಾರ ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದಿದೆ. ನೆಲಮಂಗಲದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಲಾರಿ ಸಮೇತ ಲಕ್ಷಾಂತರ ರೂ. ಮೌಲ್ಯದ ಹುಲ್ಲು ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ತ್ಯಾಮಗೊಂಡ್ಲು ಪೊಲೀಸರು ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.