ಚೆನ್ನೈ: ತಮಿಳುನಾಡು ಸರ್ಕಾರ ರಾಜ್ಯಾದ್ಯಂತ ಬೀಚ್ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಆಚರಣೆಯನ್ನು ನಿಷೇಧಿಸಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಕಡಲತೀರಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಆಚರಣೆಗಳನ್ನು ಅನುಮತಿಸಲಾಗುವುದಿಲ್ಲ. ಇದಲ್ಲದೆ ಪೊಲೀಸರು ಡ್ರಿಂಕ್ ಆಂಡ್ ಡ್ರೈವ್ ವಿರುದ್ಧ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಅನಾವಶ್ಯಕವಾಗಿ ಖಾಸಗಿ ವಾಹನಗಳನ್ನು ರೋಡಿಗೆ ಇಳಿಸಿದರೆ ಅಂತಹವರನ್ನು ಬಂಧಿಸಿ ವಾಹನಗಳನ್ನು ವಶಪಡಿಸಿಕೊಳ್ಳುವ ಎಚ್ಚರಿಕೆ ನೀಡಿದ್ದೇವೆ ಎಂದು ಡಿಜಿಪಿ ತಿಳಿಸಿದ್ದಾರೆ. ಇದನ್ನೂ ಓದಿ: ವೀಡಿಯೋ: ಮೇಕಪ್ ಆರ್ಟ್ನಿಂದ ಶಾರೂಖ್ ಆಗಿ ರೂಪಾಂತರಗೊಂಡ ಯುವತಿ
- Advertisement 2
- Advertisement 3
ರೋಡ್ ರೇಜ್ ಪ್ರಕರಣಗಳಿಗೂ ಸಹ ಕಠಿಣ ಶಿಕ್ಷೆ ನೀಡಲಾಗುತ್ತದೆ. ಎಲ್ಲಾ ಹೋಟೆಲ್ಗಳು ಪ್ರಸ್ತುತ (ಎಸ್ಒಪಿ) ಅನ್ನು ಅನುಸರಿಸಬೇಕಾಗುತ್ತದೆ. ರಾತ್ರಿ 11 ಗಂಟೆಯೊಳಗೆ ಎಲ್ಲ ಕಾರ್ಯಾಚರಣೆಯನ್ನು ಕೊನೆಗೊಳಿಸಬೇಕಾಗುತ್ತದೆ. ಹೊಸ ವರ್ಷದ ಆಚರಣೆಯ ಭಾಗವಾಗಿ ಖಾಸಗಿ ಪಾರ್ಟಿಗಳಿಗೂ ನಿರ್ಬಂಧಗಳು ಅನ್ವಯಿಸುತ್ತವೆ. ರಾಜ್ಯ ಆರೋಗ್ಯ ಸಚಿವರು ಈ ಹಿಂದೆ ಕುಟುಂಬಗಳೊಂದಿಗೆ ಮನೆಯಲ್ಲಿಯೇ ಹೊಸ ವರ್ಷವನ್ನು ಆಚರಿಸಿ ಎಂದು ಹೇಳಿದ್ದರು.
- Advertisement 4
ಎಲ್ಲಾ ದೂರದ ಪ್ರಯಾಣಿಕರು ಬಸ್ ಅಥವಾ ರೈಲಿನಲ್ಲಿ ಪ್ರಯಾಣಿಸಬೇಕು. ದ್ವಿಚಕ್ರ ವಾಹನಗಳ ಬಳಕೆಯನ್ನು ತಪ್ಪಿಸಬೇಕು. ಇದಲ್ಲದೆ, ಅಪಘಾತಗಳನ್ನು ತಪ್ಪಿಸಲು ಪ್ರತಿ 3 ಗಂಟೆಗಳಿಗೊಮ್ಮೆ ವಿರಾಮ ತೆಗೆದುಕೊಳ್ಳುವಂತೆ ಪ್ರಯಾಣಿಕರಿಗೆ ಸರ್ಕಾರವು ಸಲಹೆ ನೀಡಿದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?: ಹೆಚ್.ಡಿ.ದೇವೇಗೌಡ
ಎಲ್ಲಾ ಧಾರ್ಮಿಕ ಸ್ಥಳಗಳು ಕೋವಿಡ್ -19 ಗೆ ಸಂಬಂಧಿಸಿದಂತೆ ಈಗಾಗಲೇ ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.