ಪಣಜಿ: ಈ ಬಾರಿಯ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಅಮಿತ್ ಪಾಲೇಕರ್ ಅವರು ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಪ್ರಕಟಿಸಿದೆ.
ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: BJP ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದು ಪಕ್ಷದ ಮೊದಲ ಗುರಿ: ಓವೈಸಿ
Advertisement
Advertisement
ಅಮಿತ್ ಪಾಲೇಕರ್ ವೃತ್ತಿಯಲ್ಲಿ ವಕೀಲರಾಗಿದ್ದು, ಭಂಡಾರಿ ಸಮುದಾಯದವರಾಗಿದ್ದಾರೆ. ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
Advertisement
ಅಮಿತ್ ಪಾಲೇಕರ್ (46) ಒಬಿಸಿ ಭಂಡಾರಿ ಸಮುದಾಯಕ್ಕೆ ಸೇರಿದವರು. ಗೋವಾದಲ್ಲಿ ಈ ಸಮುದಾಯದವರ ಸಂಖ್ಯೆ ಶೇ.35ರಷ್ಟಿದೆ. ಗೋವಾ ಪಾರಂಪರಿಕ ತಾಣಗಳಲ್ಲಿ ಅಕ್ರಮ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ಕೈಗೊಂಡು ಪಾಲೇಕರ್ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬೆಂಬಲವಿಲ್ಲ: ಟಿಕಾಯತ್
Advertisement
ಪಾಲೇಕರ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎಎಪಿ ಸೇರಿದ್ದರು. ಅಲ್ಲದೇ ಸಂತ ಕ್ರೂಜ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.
ಗೋವಾ ಬದಲಾವಣೆಯನ್ನು ಬಯಸಿದೆ. ಕರಾವಳಿ ರಾಜ್ಯದಲ್ಲಿ ಎಎಪಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಜನರು ದೆಹಲಿ ಆಡಳಿತದ ಮಾದರಿಯಿಂದ ಪ್ರಭಾವಿತರಾಗಿದ್ದಾರೆ ಎಂದು ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.