-ಮೋದಿ ದಾಖಲೆ ಬಳಿಕ ಹೊಸ ದಾಖಲೆ ಬರೆದ ಚಾಣಕ್ಯ
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಲಾಲ್ ಕೃಷ್ಣ ಅಡ್ವಾಣಿ (LK Advani) ಅವರ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅಮಿತ್ ಶಾ ಅವರು 2019ರ ಮೇ 30ರಿಂದ 2025ರ ಆ.4ರವರೆಗೆ ಒಟ್ಟು 2,258 ದಿನಗಳನ್ನು (6 ವರ್ಷ 65 ದಿನ) ಪೂರೈಸಿದ್ದಾರೆ. ಇದಕ್ಕೂ ಮುನ್ನ ಲಾಲ್ ಕೃಷ್ಣ ಅಡ್ವಾಣಿ ಅವರು 1998ರ ಮಾ.19ರಿಂದ 2004ರ ಮೇ.22ರವರೆಗೆ ಸೇವೆ ಸಲ್ಲಿಸಿ ಒಟ್ಟು 2,256 ದಿನಗಳ (6 ವರ್ಷ 64 ದಿನ) ದಾಖಲೆ ಬರೆದಿದ್ದರು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಂಸದೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಗೃಹ ಸಚಿವರೆಂದು ಅಮಿತ್ ಶಾ ಅವರನ್ನು ಪ್ರಶಂಸಿಸಿದರು.ಇದನ್ನೂ ಓದಿ: ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್ ಪೋಸ್ಟ್
ಅಮಿತ್ ಶಾ ಅವರು ತಮ್ಮ ಅಧಿಕಾರವಧಿಯಲ್ಲಿ ಹತ್ತಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿ ರದ್ದು: 2019ರ ಆಗಸ್ಟ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ರದ್ದತಿಯ ಮೂಲಕ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಡಿಸಲಾಯಿತು. ಈ ಕ್ರಮವು ದೇಶದ ಏಕೀಕರಣಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಪರಿಗಣಿಸಲಾಗಿದೆ.
ಸಿಎಎ ಮತ್ತು ಎನ್‌ಆರ್‌ಸಿ: ನಾಗರಿಕತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸುವ ಮೂಲಕ ನೆರೆಯ ರಾಷ್ಟ್ರಗಳಿಂದ ಬಂದಿರುವ ಶರಣಾರ್ಥಿಗಳಿಗೆ ನಾಗರಿಕತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕೂಡ ಚರ್ಚೆಯ ಕೇಂದ್ರವಾಗಿತ್ತು.
Congratulations to Shri @AmitShah ji on becoming the longest-serving Union Home Minister in India’s history. 🇮🇳
From the historic abrogation of Article 370 to an iron-clad stance against terrorism — his tenure has been marked by unwavering resolve and decisive leadership.
The… pic.twitter.com/Bf5k3i2qQR
— BJP (@BJP4India) August 5, 2025
ಕಾನೂನು ಸುಧಾರಣೆಗಳು: ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಪಿಸಿ) ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ ಬದಲಾವಣೆ ತಂದು ಹೊಸ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ರಕ್ಷಣೆ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಪರಿಚಯಿಸಲಾಯಿತು.
ಆಂತರಿಕ ಭದ್ರತೆ: ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳನ್ನು ನಿಗ್ರಹಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಮತ್ತು ಇತರ ಭದ್ರತಾ ಸಂಸ್ಥೆಗಳನ್ನು ಬಲಪಡಿಸಲಾಗಿದೆ.
ಕೋವಿಡ್-19 ನಿರ್ವಹಣೆ: ಕೋವಿಡ್ ಮಹಾಮಾರಿಯ ಸಂದರ್ಭದಲ್ಲಿ ಆಂತರಿಕ ಭದ್ರತೆಯ ಜೊತೆಗೆ ಲಾಕ್‌ಡೌನ್‌ನಂತಹ ಕಠಿಣ ನಿರ್ಧಾರಗಳನ್ನು ಕೈಗೊಂಡು ದೇಶವನ್ನು ಸುರಕ್ಷಿತವಾಗಿಡಲು ಕೊಡುಗೆ ನೀಡಿದ್ದಾರೆ.ಇದನ್ನೂ ಓದಿ: `ಕ್ಯಾರಮ್ ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?