– ಪಹಲ್ಗಾಮ್ ದಾಳಿಯಲ್ಲಿ ಬಳಸಿದ್ದು, ಉಗ್ರನ ಬಳಿ ಸಿಕ್ಕ ರೈಫಲ್ ಒಂದೇ
– ಸ್ಥಳದಲ್ಲಿ ಸಿಕ್ಕಿದ ಚಾಕ್ಲೆಟ್ ಕೂಡ ಪಾಕಿಸ್ತಾನದ್ದು; ಗೃಹ ಸಚಿವ ಇಂಚಿಂಚೂ ಮಾಹಿತಿ
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ (Pahalgam Terror Attack) ಭಾಗಿಯಾಗಿದ್ದ ಉಗ್ರ ಹಾಶಿಮ್ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಲೋಕಸಭೆಗೆ ತಿಳಿಸಿದರು.
#WATCH | Delhi | On Congress leader P Chidambaram’s statement, Union Home Minister Amit Shah says, “Yesterday, former Home Minister Chidambaram raised a question about the proof of the terrorists coming from Pakistan… Whom does he want to save? What will he gain by defending… pic.twitter.com/govXFoKFXC
— ANI (@ANI) July 29, 2025
ಇಂದು 2 ಆಪರೇಷನ್ ಸಿಂಧೂರ (Operation Sindoor) ಚರ್ಚೆ ಮುಂದುವರಿಸಿದ ಅಮಿತ್ ಶಾ ಅವರು, ವಿಪಕ್ಷಗಳ ವಿರುದ್ಧ ಅಬ್ಬರಿಸಿ ಬೊಬ್ಬರಿದರು. ʻಆಪರೇಷನ್ ಮಹದೇವ್ʼ ಕಾರ್ಯಾಚರಣೆ ವೇಳೆ ಶ್ರೀನಗರದ ಡಚಿಗಮ್ ಎನ್‌ಕೌಂಟರ್‌ನಲ್ಲಿ ಉಗ್ರ ಹಾಶಿಮ್ ಮೂಸಾ (Hashim Musa) ಮತ್ತು ಇತರ ಇಬ್ಬರು ಉಗ್ರರನ್ನ ಕೊಲ್ಲಲಾಗಿದೆ. ಉಳಿದಿಬ್ಬರು ಕಳೆದ ವರ್ಷ ಸೋನಾಮಾರ್ಗ್ ಸುರಂಗ ದಾಳಿಯಲ್ಲಿ ಭಾಗಿಯಾಗಿದ್ದ ಜಿಬ್ರಾನ್ ಮತ್ತು ಹಮ್ಜಾ ಅಫ್ಘಾನಿ ಎಂದು ಗುರುತಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಉಗ್ರರು ಬಂದಿದ್ದು ಹೇಗೆ ಅಂತ ರಾಜನಾಥ್ ಸಿಂಗ್ ಮಾಹಿತಿಯೇ ನೀಡಲಿಲ್ಲ: ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್
.
#WATCH | Delhi | Union Home Minister Amit Shah says, “…Operation Sindoor killed those who sent the terrorists and Operation Mahadev killed those who carried out the attack… I thought that after hearing this news, there would be a wave of happiness in the ruling and the… pic.twitter.com/86q4X8l1zK
— ANI (@ANI) July 29, 2025
ಸೋಮವಾರ ನಡೆದ ʻಆಪರೇಷನ್ ಮಹಾದೇವ್ʼ ಬಗ್ಗೆ ವಿವರ ನೀಡಿದ ಶಾ, ಭಾರತೀಯ ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಜಮ್ಮು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ಸುಲೇಮಾನ್ ಮೂಸಾ, ಜಿಬ್ರಾನ್, ಹಮ್ಜಾ ಅಫ್ಘಾನಿ ಉಗ್ರರನ್ನ ಹತ್ಯೆಗೈಯಲಾಗಿದೆ. ಸುಲೇಮಾನ್ ಲಷ್ಕರ್-ಎ-ತೈಬಾ (LeT) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನಾಗಿದ್ದ. ಅಲ್ಲದೇ ಈ ಮೂವರನ್ನೂ ʻAʼ ಗ್ರೇಡ್‌ನ ಉಗ್ರರು ಎಂದು ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಾವೆಷ್ಟು ಪಾಕಿಸ್ತಾನಿ ವಿಮಾನಗಳನ್ನ ಹೊಡೆದಿದ್ದೇವೆ ಅಂತ ಯಾರೊಬ್ಬರೂ ಕೇಳಲಿಲ್ಲ – ಸಂಸತ್‌ನಲ್ಲಿ ರಾಜನಾಥ್ ಸಿಂಗ್ ಬೇಸರ
ಸ್ಥಳದಲ್ಲಿ ಸಿಕ್ಕಿದ ಚಾಕ್ಲೆಟ್ ಪಾಕಿಸ್ತಾನದ್ದು:
ಸಿಂಧೂರ ಚರ್ಚೆ ವೇಳೆ ಅಬ್ಬರಿಸಿ ಬೊಬ್ಬರಿಸಿದ ಅಮಿತ್ ಶಾ, ಉಗ್ರರು ಪಾಕಿಸ್ತಾನಕ್ಕೆ ವಾಪಸ್ ಆಗಲು ನಾವು ಅವಕಾಶ ಕೊಡಲಿಲ್ಲ. ಪಾತಕಿಗಳನ್ನ ಇಲ್ಲಿಯೇ ಕೊಲ್ಲಲಾಗಿದೆ. ಅಲ್ಲದೇ ಪಹಲ್ಗಾಮ್‌ನಲ್ಲಿ ಬಳಸಿದ್ದ ರೈಫಲ್‌ಗಳು, ಹತ್ಯೆಯಾದ ಉಗ್ರನ ಬಳಿ ಸಿಕ್ಕಿದ್ದ ರೈಫಲ್ ಒಂದೇ ಅಂತ ಖಚಿತಪಡಿಸಿದ್ದೇವೆ. ನಿನ್ನೆಯೇ ಚಂಡೀಗಢಕ್ಕೆ ವಿಮಾನದಲ್ಲಿ ರೈಫಲ್ ಕಳಿಸಿ ದೃಢಪಡಿಸಿದ್ದೇವೆ. ಪಹಲ್ಗಾಮ್ ದಾಳಿಯಲ್ಲಿ ಸಿಕ್ಕಿದ ಗುಂಡು ಮತ್ತು ನಿನ್ನೆ ಚಂಡೀಗಢ ಎಫ್‌ಎಸ್‌ಎಲ್‌ನಲ್ಲಿ ರೈಫಲ್ ಬಳಸಿ ಅದರಿಂದಲೂ ಗುಂಡು ಹಾರಿಸಿ ಖಚಿತಪಡಿಸಿದ್ದೇವೆ. ಈ ಮೂರೂ ರೈಫಲ್‌ಗಳನ್ನ ಬಳಸಿಯೇ ಪಹಲ್ಗಾಮ್‌ನಲ್ಲಿ ದಾಳಿ ಮಾಡಿರೋದು ಖಚಿತವಾಗಿದೆ. ಸತ್ತ ಇಬ್ಬರು ಉಗ್ರರ ಬಳಿ ಪಾಕಿಸ್ತಾನದ ವೋಟರ್ ಐಡಿ ಇತ್ತು. ಅಲ್ಲದೇ ಸ್ಥಳದಲ್ಲಿ ಸಿಕ್ಕಿದ ಚಾಕ್ಲೆಟ್ ಪಾಕಿಸ್ತಾನದ್ದೇ ಎಂದು ಇಂಚಿಂಚೂ ಮಾಹಿತಿಯನ್ನ ವಿವರಿಸಿದ್ರು. ಇದನ್ನೂ ಓದಿ: ರಕ್ತ ಹರಿಯುವ ಕಡೆ ಮಾತುಕತೆ ಪ್ರಸ್ತಾಪವೇ ಬರಲ್ಲ – ಆಪರೇಷನ್ ಸಿಂಧೂರ ಚರ್ಚೆಯಲ್ಲಿ ರಾಜನಾಥ್ ಸಿಂಗ್ ಘರ್ಜನೆ