ಬೆಂಗಳೂರು/ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಭದ್ರಕೋಟೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ (Amit Shah) ಸವಾರಿ… ಇದು ರಾಜ್ಯ ಬಿಜೆಪಿಯ (BJP) ಹೊಸ ಗುರಿ.
ಹೌದು. ಇದೇ ತಿಂಗಳ ಜನವರಿ 28ರಂದು ಬೆಳಗಾವಿಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ((Belagavi Rural Assembly Constituncy) ಎಂ.ಕೆ ಹುಬ್ಬಳ್ಳಿಯಲ್ಲಿ ಅಮಿತ್ ಶಾ ಸಮಾವೇಶ ನಡೆಯಲಿದೆ. ಇದನ್ನೂ ಓದಿ: ಜನವರಿ 27ಕ್ಕೆ ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ಬಿಡುಗಡೆ
Advertisement
Advertisement
ಆ ಸಮಾವೇಶದಲ್ಲೇ ಅಮಿತ್ ಶಾ, ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸುವ ಅಸ್ತ್ರ ಪ್ರಯೋಗಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತ್ ಶಾ ಸಮಾವೇಶದ ವೇಳೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಣಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಇದೇ ವೇದಿಕೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ಸೋಲಿಸುವ ಶಪಥ ಮಾಡ್ತಾರಾ ರಮೇಶ್ ಜಾರಕಿಹೊಳಿ (Ramesh Jarkiholi) ಎಂಬ ಕುತೂಹಲ ಸಹ ಕಾದಿದೆ.
Advertisement
ಈಗಾಗಲೇ ಎರಡ್ಮೂರು ಸಮಾವೇಶಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿರುವ ರಮೇಶ್ ಜಾರಕಿಹೊಳಿ ಎಂ.ಕೆ.ಹುಬ್ಬಳ್ಳಿ ಸಮಾವೇಶದಲ್ಲಿ ಏನು ಹೊಸ ಸವಾಲು ಹಾಕ್ತಾರೆ ಎಂಬ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ. ಇದನ್ನೂ ಓದಿ: ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ
Advertisement
ಗೆದ್ದ ಕ್ಷೇತ್ರದಲ್ಲಿ ನಾನು ಮಾಡೋದೇನಿದೆ?: ಇನ್ನು ಬಿಜೆಪಿ ಗೆದ್ದಿರುವ ಕ್ಷೇತ್ರಗಳಲ್ಲಿ ನಾನು ಬಂದು ಮಾಡೋದು ಏನಿದೆ? ಗೆದ್ದಿರುವುದನ್ನ ಉಳಿಸಿಕೊಳ್ಳುವ ಜವಾಬ್ದಾರಿ ನಿಮ್ಮದು, ನನ್ನ ಕರೆಯಬೇಡಿ. ಕಳೆದ ಸಲ ಯಾವ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆಯೋ ಅಲ್ಲಿಯೇ ನನ್ನ ಯುದ್ಧ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಶಾ ಖಡಕ್ ಸಂದೇಶ ರವಾನಿಸಿದ್ದಾರೆ. ಆ ತಂತ್ರದ ಮೊದಲ ಭಾಗವಾಗಿ ಮಂಡ್ಯ ಸಮಾವೇಶದ ಬಳಿಕ ಈಗ ಬೆಳಗಾವಿ, ಹುಬ್ಬಳ್ಳಿ ಜಿಲ್ಲೆಗಳನ್ನ ಟಾರ್ಗೆಟ್ ಮಾಡಲಾಗಿದೆ.
ಜನವರಿ 28ರಂದೇ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ಕುಂದಗೋಳದಲ್ಲೂ ಅಮಿತ್ ಶಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಸಕರಿಲ್ಲದ ಕ್ಷೇತ್ರಗಳಲ್ಲೇ ನನ್ನ ಸಂಚಾರ ಎಂದಿರುವ ಶಾ ಕಳೆದುಕೊಂಡ ಕ್ಷೇತ್ರಗಳನ್ನ ಗೆಲ್ಲುವ ಪ್ಲಾನ್ ಸಕ್ಸಸ್ ಆಗುತ್ತಾ? ಅನ್ನೋದನ್ನ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k