ಬೆಂಗಳೂರು: ಬಜರಂಗದಳ (Bajrang Dal) ಅತ್ಯತ್ತಮ ಸಂಘಟನೆಯಾಗಿದ್ದರೆ, ಅಮಿತ್ ಶಾ (Amit Shah) ಅವರು ತಮ್ಮ ಮಗನನ್ನು ಬಿಸಿಸಿಐ ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ ಎಂದು ರಾಜ್ಯ ಕಾಂಗ್ರೆಸ್ ( Congress) ಟ್ವಿಟ್ಟರ್‌ನಲ್ಲಿ ದಾಳಿ ನಡೆಸಿದೆ.
ಬಸವರಾಜ ಬೊಮ್ಮಾಯಿಯವರು (Basavaraj Bommai) ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ. ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರು, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟಿಗೆ ಅಲೆಯುವಂತೆ ಮಾಡುವುದನ್ನು ಬಿಡಲಿ ಎಂದು ಕೆಂಡಕಾರಿದೆ. ಇದನ್ನೂ ಓದಿ: ಅಗತ್ಯವಿದ್ದರೆ ರಾಜ್ಯದಲ್ಲೂ ಬಜರಂಗದಳ ನಿಷೇಧ ಮಾಡ್ತೀವಿ – ಛತ್ತೀಸಗಢ ಸಿಎಂ
Advertisement
ಕಾಂಗ್ರೆಸ್ ಟ್ವೀಟ್‍ನಲ್ಲಿ ಏನಿದೆ?
ಬಜರಂಗದಳದ ಬಗ್ಗೆ ಬಹಳ ಮಾತನಾಡುವ ಬಿಜೆಪಿ (BJP) ನಾಯಕರಿಗೆ ಕಾಂಗ್ರೆಸ್ ಸರಣಿ ಪ್ರಶ್ನೆಗಳನ್ನಿಟ್ಟಿದೆ. ಸಿಟಿ ರವಿ ಮಕ್ಕಳು ಬಜರಂಗದಳದ ಯಾವ ಹುದ್ದೆಯಲ್ಲಿದ್ದಾರೆ? ಆರ್ ಅಶೋಕ್ ಮಗ ಬಜರಂಗದಳಲ್ಲಿ ಏನು ಕೆಲಸ ಮಾಡುತ್ತಿದ್ದಾರೆ? ತೇಜಸ್ವಿ ಸೂರ್ಯ ಏಕೆ ಬಜರಂಗದಳ ಸೇರಿಲ್ಲ? ಬೊಮ್ಮಾಯಿ ಮಗ ಬಜರಂಗದಳ ಸೇರಿ ಬೆಂಕಿ ಹಚ್ಚುವುದನ್ನು ಬಿಟ್ಟು ಉದ್ಯಮಿಯಾಗಿದ್ದೇಕೆ?
Advertisement
ಬಜರಂಗದಳ ಅತ್ಯತ್ತಮ ಸಂಘಟನೆಯಾಗಿದ್ದರೆ @AmitShah ಅವರು ತಮ್ಮ ಮಗನನ್ನು BCCI ಹುದ್ದೆಯಿಂದ ಕಿತ್ತು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ನೇಮಿಸಲಿ.@BSBommai ತಮ್ಮ ಮಗನ ಉದ್ಯಮವನ್ನು ಮುಚ್ಚಿಸಿ ರಾಜ್ಯಾಧ್ಯಕ್ಷನನ್ನಾಗಿ ಮಾಡಲಿ.
ಬಿಜೆಪಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಡವರ, ದಲಿತ, ಹಿಂದುಳಿದವರ ಮಕ್ಕಳನ್ನು ಬಳಸಿ ಕೋರ್ಟು, ಕೇಸಿಗೆ…
— Karnataka Congress (@INCKarnataka) May 4, 2023
Advertisement
ಬಜರಂಗದಳ ಬಿಜೆಪಿಯ ಅಂಗ ಸಂಘಟನೆಯೇ? ಇಷ್ಟೊಂದು ಮಮಕಾರ ತೋರುವ ಬಿಜೆಪಿ, ಬಜರಂಗದಳದವರಿಗೆ ಎಷ್ಟು ಟಿಕೆಟ್ ನೀಡಿದೆ? ಹಿರಿಯರ ನಾಯಕತ್ವವನ್ನು ಮುಗಿಸಲು ಅವರ ಮಕ್ಕಳು, ಸೊಸೆಯಂದಿರು, ಪತ್ನಿಯರಿಗೆ ಟಿಕೆಟ್ ನೀಡುವ ಬದಲು ಬಜರಂಗದಳದವರಿಗೆ ಟಿಕೆಟ್ ಏಕೆ ನೀಡಿಲ್ಲ?
Advertisement
ಅಮಾಯಕ ಹುಡುಗರನ್ನು ಕಾನೂನು ವಿರೋಧಿ ಕೃತ್ಯಗಳಿಗೆ ಬಳಸಿ ಲಾಭ ಪಡೆಯುವುದು ಮಾತ್ರ ಬಿಜೆಪಿಯ ಕೆಲಸವೇ? ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವ ಬಜರಂಗದಳ ಪಿಎಫ್‍ಐ ಸೇರಿದಂತೆ ಯಾವುದೇ ಸಂಘಟನೆಯ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರೆ ಬಿಜೆಪಿ ಉರಿದು ಬೀಳುತ್ತದೆ. ಆದರೆ ಸಂವಿಧಾನ ಬದಲಿಸುತ್ತೇವೆ ಎಂದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆಗಳನ್ನು ಕಾಂಗ್ರೆಸ್ ಎತ್ತಿದೆ.
ಬಿಜೆಪಿಗೆ ಸಂವಿಧಾನ ಮುಖ್ಯವೇ, ಸಂವಿಧಾನ ವಿರೋಧಿ ಸಂಘಟನೆಗಳು ಮುಖ್ಯವೇ? ಸ್ಪಷ್ಟಪಡಿಸಿ ಮುಂದಿನ ಮಾತಾಡಲಿ. ಬಜರಂಗದಳ ಬಿಜೆಪಿಯ ಮುದ್ದಿನ ಕೂಸು ಎಂದಾದರೆ, ದಿನೇಶ್ ನಾಯ್ಕ ಎಂಬ ದಲಿತನ ಕೊಲೆಯ ಹೊಣೆಯನ್ನು ಬಿಜೆಪಿ ಹೊರಲಿ. ಮಂಗಳೂರಿನ ಪಬ್ ದಾಳಿಯ ಹೊಣೆಯನ್ನು ಬಿಜೆಪಿ ಹೊರಲಿ. ಸಮಾಜಘಾತುಕ ಕೃತ್ಯಗಳೆಲ್ಲದರ ಹೊಣೆಯನ್ನು ಬಿಜೆಪಿಯೇ ಹೊರಲಿ. ನಂತರ ಬಜರಂಗದಳವನ್ನು ಸಮರ್ಥಿಸಿಕೊಳ್ಳಲಿ ಎಂದು ಹರಿಹಾಯ್ದಿದೆ.
ನಿಜವಾದ ಭಜರಂಗಿಗಳು (ಕ್ರೀಡಾಪಟುಗಳು) ದೆಹಲಿಯ ಜಂತರ್ ಮಂಥರ್‌ನಲ್ಲಿ ತಮಗಾದ ಶೋಷಣೆಯ ನೋವು ತಾಳದೆ ಪ್ರತಿಭಟಿಸುತ್ತಿದ್ದಾರೆ. ಮೋದಿಯವರೇ (Narendra Modi), ಇಲ್ಲಿನ ನಕಲಿ ಭಜರಂಗಿಗಳ ಓಲೈಕೆ ಬಿಟ್ಟು ಅಸಲಿ ಭಜರಂಗಿಗಳ ನೋವು ಆಲಿಸಿ. ಅಲ್ಲೂ “ಬಜರಂಗಿ ಪುನಿಯಾ” ಎಂಬ ಹೆಸರಿನ ಕ್ರೀಡಾಪಟು ನೋವಿನಲ್ಲಿದ್ದಾರೆ. ನಿಮಗೆ ಆ ಅಸಲಿ ಬಜರಂಗಿಗಳ ಹಿತ ಬೇಡವೇ ಎಂದು ಪ್ರಶ್ನಿಸಿ ಸರಣಿ ಟ್ವೀಟ್ ಮಾಡಿ ಕಿಡಿಕಾರಿದೆ. ಇದನ್ನೂ ಓದಿ: ಬ್ರಾಹ್ಮಣರು ಭಾರತದವರಲ್ಲ, ರಷ್ಯಾದಿಂದ ಬಂದಿದ್ದಾರೆ: ಆರ್‌ಜೆಡಿ ನಾಯಕ ಯದುವಂಶ್ ಕುಮಾರ್