ಸಂಜೆ 4.30ರ ಸುಮಾರಿಗೆ ವೇದವ್ಯಾಸ ಗುರುಕುಲಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಗುರುಕುಲದ ವಿದ್ಯಾರ್ಥಿಗಳು ವೇದಘೋಷದೊಂದಿಗೆ ಪೂರ್ಣಕುಂಭ ಸ್ವಾಗತ ನೀಡಿದರು. ಡಾ.ವರಖೇಡಿ ಶ್ರೀನಿವಾಸ ಆಚಾರ್ಯ, ಡಾ. ವಿಠೋಬಾಚಾರ್ಯ ಹಾಗೂ ವಾಸುದೇವ ಭಟ್ ಪೆರಂಪಳ್ಳಿ ಅವರು ಅವರನ್ನು ಬರಮಾಡಿಕೊಂಡರು. ಇದನ್ನೂ ಓದಿ: ರಾಮ ಮಂದಿರದಲ್ಲಿ 105 ಬಾರಿ ಕಾಣಿಕೆ ಕಳವು, ಸೆ.25ರ ಒಳಗಡೆ ಚಾರ್ಜ್‌ಶೀಟ್ ಸಲ್ಲಿಕೆ: ಸುಪ್ರೀಂಗೆ ಎಸ್‌ಐಟಿ

ಆನಂತರ ಶ್ರೀ ಕೃಷ್ಣಧಾಮಕ್ಕೆ ತೆರಳಿದ ಅಮಿತ್ ಶಾ ಶ್ರೀ ಕೃಷ್ಣ ದೇವರ ದರ್ಶನ ಪಡೆದು ಪಂಚದೀಪಗಳನ್ನು ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಂಸ್ಥಾನದ ಪಟ್ಟದ ದೇವರ ದರ್ಶನ ಪಡೆದ ಅವರು, ಶ್ರೀ ವಿಶ್ವತೀರ್ಥ ಸಂಸ್ಮರಣ ಧ್ಯಾನಮಂದಿರಕ್ಕೆ ತೆರಳಿ ಪಾದುಕಾ ದರ್ಶನ ಮಾಡಿದರು.
ತದನಂತರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾದ ಅಮಿತ್ ಶಾ ಅವರು ಫಲಪುಷ್ಪ ಸಮರ್ಪಿಸಿ ಸತ್ಕರಿಸಿದರು. ಸ್ವಾಮೀಜಿಯವರೊಂದಿಗೆ ಕೆಲಹೊತ್ತು ಆಪ್ತ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀಪಾದರು ಅಮಿತ್ ಶಾ ಅವರಿಗೆ ಶಾಲು, ಪೇಟ ಹಾಗೂ ಹಾರ ಹಾಕಿ ಸನ್ಮಾನಿಸಿ, ಸ್ಮರಣಿಕೆ ಸಹಿತ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.ಇದನ್ನೂ ಓದಿ:` ವಂದೇ ಮಾತರಂ’ಗೆ ಕತ್ತರಿ; ಕಾಂಗ್ರೆಸ್ ವಿರುದ್ಧ ಸಂಸತ್ತಿನಲ್ಲಿ ರಣಕಹಳೆ: ಪ್ರಹ್ಲಾದ್ ಜೋಶಿ

ಈ ಸಂದರ್ಭದಲ್ಲಿ ಸಂಸದರಾದ ಬಾನ್ಸುರಿ ಸ್ವರಾಜ್, ರಾಮ್ ವೀರ್ ಸಿಂಗ್ ಬಿಧೂರಿ, ಶಾಸಕರಾದ ಅನಿಲ್ ಶರ್ಮಾ, ಕೈಲಾಶ್ ಗೆಹ್ಲೋಟ್, ಡಿಡಿಎ ಸದಸ್ಯ ರಾಜೀವ್ ಬಬ್ಬರ್, ರಾಕೇಶ್ ಗೌರ್, ವಿದ್ವಾನ್ ಎನ್. ವಿಠಲ ಭಟ್, ಟಿ.ಪಿ. ಅನಂತ್ ಹಾಗೂ ಶ್ರೀಗಳ ಆಪ್ತ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಭಟ್, ಅಶ್ವಿನ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಇದನ್ನೂ ಓದಿ: ಸೇನಾ ಮುಖ್ಯಸ್ಥರು, ಚುನಾವಣಾ ಆಯುಕ್ತರು ಸೇರಿ ಪ್ರಮುಖರಿಗೆ SIR ನೋಟಿಸ್

