ಬೆಂಗಳೂರು: ಬಿಜೆಪಿ ಭಾನುವಾರ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ ಈ ಬಾರಿ ಚುನಾವಣೆಯಲ್ಲಿ ತೀವ್ರ ಕುತೂಹಲ ಹುಟ್ಟಿಸಿರುವ ಮೈಸೂರಿನ ವರುಣಾ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಮಾತ್ರ ಘೋಷಣೆ ಮಾಡಿಲ್ಲ. ಇದನ್ನೂ ಓದಿ: ಬಿಜೆಪಿಯ 72 ಮಂದಿ ಅಧಿಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ?
ಕಾಂಗ್ರೆಸ್‍ನಿಂದ ಚಾಮುಂಡೇಶ್ವರಿ ಕ್ಷೇತ್ರದಿಂದ ಸಿಎಂ ಸಿದರಾಮಯ್ಯ ಮತ್ತು ವರುಣಾದಿಂದ ಪುತ್ರ ಯತೀಂದ್ರ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ವರುಣಾ ಕ್ಷೇತ್ರದ ಟಿಕೆಟ್ ಫೈನಲ್ ಮಾಡೋದು ಬೇಡ. ಸಿಎಂ ಸಿದ್ದರಾಮಯ್ಯ ಅವರನ್ನ ವರುಣಾ ಅಥವಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿಯೇ ಕಟ್ಟಿ ಹಾಕಬೇಕು. ನಾವು ಸಿದ್ದರಾಮಯ್ಯ ಗೇಮ್ ಗೆ ನಾವು ರೀ ಗೇಮ್ ಆಡೋಣ ಅಂತಾ ಅಮಿತ್ ಶಾ ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದೆ. ಇದನ್ನೂ ಓದಿ: ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ
Advertisement
Advertisement
ಭಾನುವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಟ್ಟಿ ಪ್ರಕಟ ಬಳಿಕ ಸಿದ್ದರಾಮಯ್ಯ ಮತ್ತು ಯತೀಂದ್ರ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸ್ತಾರೆ ಎಂಬುದು ಖಾತ್ರಿಯಾದ ಮೇಲೆ ಅಲ್ಲಿಯ ಅಭ್ಯರ್ಥಿಯ ಹೆಸರು ಘೋಷಣೆ ಮಾಡಲು ಅಮಿತ್ ಶಾ ಚಿಂತಿಸಿದ್ದಾರೆ ಎನ್ನಲಾಗಿದೆ.