ಚಂಡೀಗಢ: ಪಂಜಾಬ್‍ನಿಂದ ಡ್ರಗ್ಸ್ ನಿರ್ಮೂಲನೆ ಮಾಡುತ್ತೇವೆ. ಡ್ರಗ್ಸ್ ಮುಕ್ತ ಪಂಜಾಬ್ ಮಾಡುವುದೇ ನಮ್ಮ ಗುರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿಗೆ ಅವಕಾಶ ನೀಡುವಂತೆ ಜನತೆಯನ್ನು ಒತ್ತಾಯಿಸಿದ ಅಮಿತ್ ಶಾ ಪಂಜಾಬ್ ಅನ್ನು ಡ್ರಗ್ಸ್ ಮುಕ್ತ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರೇಡಿಯೋ ಜನರನ್ನು ಸಂಪರ್ಕಿಸುವ ಅದ್ಭುತ ಮಾಧ್ಯಮ: ನರೇಂದ್ರ ಮೋದಿ
Advertisement
Advertisement
ಪಂಜಾಬ್‍ನಲ್ಲಿ ಸರ್ಕಾರ ರಚನೆಯಾದ ಮೇಲೆ ರಾಜ್ಯದ 4 ನಗರಗಳಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾಖೆಗಳನ್ನು ಸ್ಥಾಪಿಸುತ್ತೇವೆ. ಮಾದಕ ದ್ರವ್ಯ ತಡೆಗಟ್ಟುವಿಕೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಕಾರ್ಯಪಡೆಯನ್ನು ರಚಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟಾಟಾ ಸನ್ಸ್ ಗ್ರೂಪ್‌ಗೆ ಎನ್ ಚಂದ್ರಶೇಖರನ್ ಅಧ್ಯಕ್ಷರಾಗಿ ಮರು ನೇಮಕ
Advertisement
ಫೆಬ್ರವರಿ 20ರಂದು ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಪಂಜಾಬ್‍ನಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದು, ಬಹುಮತ ಗಳಿಸಿ ಅಧಿಕಾರ ಪಡೆದುಕೊಂಡಿತ್ತು.