ಲಕ್ನೋ: ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶದಲ್ಲಿ UCC ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಘೋಷಣೆ ಮಾಡಿದ್ದಾರೆ.
ಯುಪಿ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಮಿತ್ ಶಾ ಮಹತ್ವದ ಘೋಷಣೆ ಮಾಡಿದ್ದಾರೆ. 2027ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 12 ವರ್ಷಗಳಲ್ಲಿ ಭಾರತದಲ್ಲಿ 49.6 ಕೋಟಿ ಜನ ಬಡತನದಿಂದ ಮುಕ್ತಿ- ತೀವ್ರ ಬಡತನ ಶೇ. 27.1 ರಿಂದ ಶೇ. 2.6ಕ್ಕೆ ಇಳಿಕೆ: ವಿಶ್ವಬ್ಯಾಂಕ್
ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. 1990ರ ಅಕ್ಟೋಬರ್ 30ರಂದು ಅಯೋಧ್ಯೆಯಲ್ಲಿ ರಾಮಭಕ್ತರ ಮೇಲೆ ಗುಂಡಿನ ದಾಳಿ ನಡೆದಿತ್ತು. ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಯಾವ ಮುಖ ಇಟ್ಟುಕೊಂಡು ಅಧಿಕಾರದ ಕನಸು ಕಾಣುತ್ತಿದ್ದಾರೆ? ನಾವು ರಾಮಮಂದಿರ ನಿರ್ಮಿಸಿದ್ದೇವೆ, ನೀವು ರಾಮಭಕ್ತರ ಮೇಲೆ ಗುಂಡು ಹಾರಿಸಿದ್ದೀರಿ. ಮೂರು ತಲೆಮಾರು ಕಳೆದರೂ ಜನ ನಿಮ್ಮನ್ನು ಕ್ಷಮಿಸುವುದಿಲ್ಲ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ, ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿನ ಬಿಜೆಪಿ ಸರ್ಕಾರವು ಅಂಗದನ ಕಾಲಿನಂತಿದೆ; ಅದನ್ನು ಯಾರೂ ಕದಲಿಸಲು ಸಾಧ್ಯವಿಲ್ಲ. ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ ಎಂದಿದ್ದಾರೆ. ಇದನ್ನೂ ಓದಿ: ಐಡಿಬಿಐ ಮಾರಾಟ| ಜನಾರ್ದನ ಪೂಜಾರಿ ಸಾಲ ಮೇಳವನ್ನು ಉಲ್ಲೇಖಿಸಿ ರಾಹುಲ್ಗೆ ಸೀತಾರಾಮನ್ ತಿರುಗೇಟು
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾ, ಅವರ ಪಕ್ಷವು ಮುಂದಿನ ಮೂರು ದಶಕಗಳ ಕಾಲ ಅಧಿಕಾರದಿಂದ ದೂರವೇ ಉಳಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
