ಬೆಂಗಳೂರು: ಭಾರತವನ್ನು ಸಶಕ್ತವಾಗಿ ಕಟ್ಟಿ ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಾಪಿಸುವುದು ಮತ್ತು ಯುವಜನರಿಗೆ ಉಜ್ವಲ ಅವಕಾಶಗಳನ್ನು ಒದಗಿಸಬೇಕೆನ್ನುವುದೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಂಕಲ್ಪವಾಗಿದೆ. ಈ ಕ್ರಾಂತಿಕಾರಕ ಬದಲಾವಣೆಗಳನ್ನು ತರಲೆಂದೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದ್ದು, ಭಾರತವನ್ನು ಜ್ಞಾನಾಧರಿತ ಸೂಪರ್ ಪವರ್ ಮಾಡಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದರು.
ಕೇಂದ್ರ ಸರಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಇಲ್ಲಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ನೂತನ ವಿವಿಯ ಶೈಕ್ಷಣಿಕ ಸಮುಚ್ಛಯ ನಿರ್ಮಾಣಕ್ಕೆ ಶಂಕುಸ್ಥಾಪನೆ, ಲಾಂಛನ ಅನಾವರಣ ಮತ್ತು ಬಳ್ಳಾರಿಯಲ್ಲಿ ಸ್ಥಾಪಿಸಲಾಗಿರುವ ವಿಧಿವಿಜ್ಞಾನ ಪ್ರಯೋಗಾಲಯದ ವರ್ಚುಯಲ್ ಉದ್ಘಾಟನೆಯನ್ನು ನೆರವೇರಿಸಿದರು.
Advertisement
Advertisement
ದೇಶದಲ್ಲಿ ಸಂಭವಿಸುತ್ತಿರುವ ಶೈಕ್ಷಣಿಕ ಕ್ರಾಂತಿಯಲ್ಲಿ ಭಾರತೀಯ ಪ್ರಾದೇಶಿಕ ಭಾಷೆಗಳಿಗೆ ಮಹತ್ವದ ಸ್ಥಾನವಿದೆ. ಎನ್‍ಇಪಿಯನ್ನು ಕರ್ನಾಟಕವು ದೇಶದ ಮೊದಲ ರಾಜ್ಯವಾಗಿ ಜಾರಿಗೆ ತಂದಿದ್ದು ಶ್ಲಾಘನೀಯ ನಡೆಯಾಗಿದೆ. ಇದೊಂದು ಮಾದರಿ ನಡೆ. ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಅವರಲ್ಲಿ ದೇಶಭಕ್ತಿಯ ಸಂಸ್ಕಾರವನ್ನು ಬೆಳೆಸಬೇಕಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇದು ಕೇಂದ್ರ ಸರ್ಕಾರದ ಪ್ರತಿಜ್ಞೆಯಾಗಿದೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಮಿತ್ ಶಾ ಮಿಂಚಿನ ಸಂಚಾರ- ವಿದ್ಯಾರ್ಥಿಗಳಿಗೆ ಜೋಷ್ ತುಂಬಿದ ಕೇಂದ್ರ ಸಚಿವ
Advertisement
ಒಂದು ದೇಶ ದೊಡ್ಡದೊಡ್ಡ ಸಾಧನೆಗಳನ್ನು ಮಾಡಲು ವ್ಯಕ್ತಿಗಳ ಚಿಕ್ಕಚಿಕ್ಕ ಸಂಕಲ್ಪಗಳು ನಿರ್ಣಾಯಕ ಕೊಡುಗೆ ಕೊಡುತ್ತವೆ. ಈ ನಿಟ್ಟಿನಲ್ಲಿ, ದೇಶವನ್ನು ಪ್ರೀತಿಸುವಂತಹ ಶಿಕ್ಷಣವನ್ನು ಎನ್‍ಇಪಿ ಅಡಿಯಲ್ಲಿ ಒದಗಿಸಲಾಗುವುದು.ಇದು ಸಂಪೂರ್ಣ ಭಾರತೀಯ ದೃಷ್ಟಿಕೋನವನ್ನು ಹೊಂದಿದೆ. ದೇಶದ ಪ್ರಗತಿಯ ದೃಷ್ಟಿಯಿಂದ ಮುಂದಿನ 25 ವರ್ಷಗಳಿಗೆ ಅತಿಶಯ ಮಹತ್ವವಿದ್ದು, ಭಾರತವು ವಿಶ್ವಗುರು ಎನಿಸಿಕೊಳ್ಳುವುದು ನಿಶ್ಚಿತ ಎಂದು ಅವರು ಪ್ರತಿಪಾದಿಸಿದರು.
Advertisement
ಕಳೆದ ಎಂಟು ವರ್ಷಗಳಿಂದ ಈಚೆಗೆ ದೇಶದ ಗ್ರಾಮೀಣ ಭಾಗದಲ್ಲಿ 410 ಉನ್ನತ ಶಿಕ್ಷಣ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಜತೆಗೆ ಜಮ್ಮು-ಕಾಶ್ಮೀರದ ಲಡಾಖ್ ಮತ್ತು ಈಶಾನ್ಯ ಭಾರತ ಸೇರಿದಂತೆ ಉದ್ದಗಲಕ್ಕೂ ಕೇಂದ್ರೀಯ ವಿವಿ, ಏಮ್ಸ್, ಐಐಟಿಗಳು, ವೈದ್ಯಕೀಯ ಕಾಲೇಜುಗಳು ಮತ್ತು ಹೊಸ ಜ್ಞಾನಶಾಖೆಗಳ ವಿವಿಗಳನ್ನು ಆರಂಭಿಸಲಾಗಿದೆ. ಈ ಮೂಲಕ ದೇಶದ ಎಲ್ಲಾ ಭಾಗಗಳನ್ನೂ ಸಮಾನವಾಗಿ ಕಾಣಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಕುಟುಂಬದವರಿಂದ ಅಮಿತ್ ಶಾಗೆ ಸನ್ಮಾನ
ಪ್ರಧಾನಿ ಮೋದಿ ತಮ್ಮ ದಕ್ಷ ನೀತಿಗಳ ಮೂಲಕ ದೇಶವನ್ನು ಜಾಗತಿಕ ತಯಾರಿಕಾ ವಲಯವಾಗಿ ಬೆಳೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ, ಭಯೋತ್ಪಾದನೆ ಮತ್ತಿತರ ಪಿಡುಗುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ ಭಾರತವು ಅಮೆರಿಕ ಮತ್ತು ಇಸ್ರೇಲ್ ದೇಶಗಳ ಮಟ್ಟಕ್ಕೆ ಬೆಳೆದು, ಬೆಳಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.