ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ (Maharashtra) ಎನ್‌ಡಿಎ (NDA) ಕಳಪೆ ಪ್ರದರ್ಶನದ ಹೊಣೆ ಹೊತ್ತು ದೇವೇಂದ್ರ ಫಡ್ನವೀಸ್ ಡಿಸಿಎಂ ಸ್ಥಾನದ ರಾಜೀನಾಮೆ ಪ್ರಸ್ತಾಪವನ್ನು ಅಮಿತ್ ಶಾ (Amit Shah) ಅವರು ತಿರಸ್ಕರಿಸಿದ್ದಾರೆ. ಪಕ್ಷದ ಬಲವರ್ಧನೆಗೆ ಸೇವೆ ಮುಂದುವರಿಸುವಂತೆ ಸಲಹೆ ನೀಡಿದ್ದಾರೆ.
ಡಿಸಿಎಂ ಫಡ್ನವೀಸ್ (Devendra Fadnavis) ಅವರು ಶಿವಸೇನೆಯ ಏಕನಾಥ್ ಶಿಂಧೆ ಬಣ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಜೊತೆ ಮಹಾರಾಷ್ಟ್ರ ಸರ್ಕಾರದ ಭಾಗವಾಗಿದ್ದಾರೆ. ಅವಿಭಜಿತ ಶಿವಸೇನೆ ಮತ್ತು ಬಿಜೆಪಿ 2019 ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 48 ರ ಪೈಕಿ 41 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ಈ ಬಾರಿ ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ಒಕ್ಕೂಟವಾಗಿ ಮಿತ್ರ ಪಕ್ಷಗಳು ಕಣಕ್ಕಿದಿದ್ದವು. ಆದರೆ ಚುನಾವಣೆಯಲ್ಲಿ ಕೇವಲ 17 ಸ್ಥಾನ ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾದವು. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ
Advertisement
Advertisement
ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ಚಂದ್ರ ಪವಾರ್) ಒಳಗೊಂಡ ಮಹಾ ವಿಕಾಸ್ ಅಘಾಡಿ 30 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತು. ಫಲಿತಾಂಶ ಹೊರಬಿದ್ದ ಮಾರನೇ ದಿನ ಫಡ್ನವೀಸ್ ಬುಧವಾರ ರಾಜೀನಾಮೆ ಪ್ರಸ್ತಾಪ ಮಾಡಿದರು. ಶುಕ್ರವಾರದ ಮೊದಲು ನಡೆದ ಎನ್‌ಡಿಎ ಸಭೆಯ ನಂತರ, ಬಿಜೆಪಿ ನಾಯಕರು ಸಹ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಕುಳಿತು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಕಾರ್ಯಕ್ಷಮತೆಯನ್ನು ಚರ್ಚಿಸಿದರು. ಈ ವೇಳೆ ಫಡ್ನವಿಸ್ ರಾಜೀನಾಮೆ ವಿಷಯ ಪ್ರಸ್ತಾಪಿಸಿದ್ದರು.
Advertisement
ನಂತರ ಡಿಸಿಎಂ ಫಡ್ನವೀಸ್, ಅಮಿತ್ ಶಾರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಫಡ್ನವೀಸ್ ರಾಜೀನಾಮೆ ಪ್ರಸ್ತಾಪವನ್ನು ತಿರಸ್ಕರಿಸಿರುವ ಅಮಿತ್ ಶಾ, ಮಹಾರಾಷ್ಟ್ರ ಸರ್ಕಾರಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪುನರುಜ್ಜೀವನಕ್ಕೆ ಯೋಜನೆ ಸಿದ್ಧಪಡಿಸುವಂತೆ ಸಲಹೆ ನೀಡಿದ್ದಾರೆ. ಈ ವರ್ಷದ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ಕಾಲಿಗೆ ನಮಸ್ಕರಿಸಲು ಬಂದ ನಿತೀಶ್‌ರನ್ನು ತಡೆದ ಮೋದಿ- ವೀಡಿಯೋ ವೈರಲ್
Advertisement
ನೀವು ರಾಜೀನಾಮೆ ನೀಡಿದರೆ, ಅದು ಬಿಜೆಪಿ ಕಾರ್ಯಕರ್ತರ ನೈತಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಈಗ ರಾಜೀನಾಮೆ ನೀಡಬೇಡಿ ಎಂದು ಫಡ್ನವೀಸ್‌ಗೆ ಅಮಿತ್ ಶಾ ತಿಳಿಸಿದ್ದಾರೆಂದು ಮೂಲಗಳು ಹೇಳಿವೆ. ಭಾನುವಾರ ಸಂಜೆ 6 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಜೀನಾಮೆ ನೀಡುವ ಬಗ್ಗೆ ವಿವರವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.