Connect with us

Latest

10 ದಿನದೊಳಗೆ ಸ್ಪಷ್ಟನೆ ನೀಡಿ- ಗೋಡ್ಸೆ ಹೇಳಿಕೆ ನೀಡಿದ ನಾಯಕರಿಗೆ ಅಮಿತ್ ಶಾ ಸೂಚನೆ

Published

on

ನವದೆಹಲಿ: ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಮುಖಂಡರ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ.

10 ದಿನಗಳ ಒಳಗೆ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪ್ರಮುಖವಾಗಿ ಟಾರ್ಗೆಟ್ ಮಾಡಿದ್ದ ರಾಜೀವ್ ಗಾಂಧಿ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್, ಗೋಡ್ಸೆಗೆ ಹೋಲಿಕೆ ಮಾಡಿ ಟ್ವೀಟ್ ಮಾಡಿದ್ದರು. ಇತ್ತ ಸಂಸದ ಅನಂತ್‍ಕುಮಾರ್ ಹೆಗ್ಡೆ ಅವರು ಟ್ವಿಟ್ಟರ್ ಖಾತೆಯಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರಿನ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಂ ಗೋಡ್ಸೆ ಈ ಚರ್ಚೆ ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದನ್ನು ಓದಿ: ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

ಸದ್ಯ ಚುನಾವಣಾ ಅಂತಿಮ ಹಂತದ ಮತದಾನದ ಸಮಯವಾಗಿರುವ ವೇಳೆಯಲ್ಲೇ ಸಂಸದರ ಈ ಹೇಳಿಕೆಗಳು ಸಾಕಷ್ಟು ವಿವಾದವನ್ನು ಸೃಷ್ಟಿಸಿದ್ದು, ಈ ಹೇಳಿಕೆಗಳನ್ನೆ ಕಾಂಗ್ರೆಸ್ ಅಂತಿಮ ದಿನದ ಪ್ರಚಾರದಲ್ಲಿ ಪ್ರಸ್ತಾಪ ಮಾಡಿ ವಾಗ್ದಾಳಿ ನಡೆಸಿದೆ.  ಇದನ್ನು ಓದಿ: ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

Click to comment

Leave a Reply

Your email address will not be published. Required fields are marked *