ನವದೆಹಲಿ: ಕರ್ತಾರ್‌ಪುರ ಕಾರಿಡಾರ್ ಅನ್ನು ಬುಧವಾರದಿಂದ ಮತ್ತೆ ತೆರೆಯಲಾಗುವುದಾಗಿ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಈ ಕುರಿತಂತೆ ಅಮಿತ್ ಶಾ ಅವರು, ತಮ್ಮ ಟ್ವಿಟ್ಟರ್‌ನಲ್ಲಿ, ಸಾಕಷ್ಟು ಮಂದಿ ಸಿಖ್ ಯಾತ್ರಾರ್ಥಿಗಳಿಗೆ ಅನುಕೂಲವಾಗಲೆಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ನಾಳೆ ಅಂದರೆ ನವೆಂಬರ್ 17ರಿಂದ ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅನ್ನು ಪುನಃ ತೆರೆಯಲು ನಿರ್ಧರಿಸಿದೆ. ಈ ನಿರ್ಧಾರವು ಶ್ರೀ ಗುರುನಾನಕ್ ದೇವ್ ಜಿ ಮತ್ತು ನಮ್ಮ ಸಿಖ್ ರಾಷ್ಟ್ರದ ಬಗ್ಗೆ ಮೋದಿ ಸರ್ಕಾರ ಹೊಂದಿರುವ ಅಪಾರ ಭಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ, ಗೃಹ ಸಚಿವರ ಕಾರ್ಯಕ್ರಮಕ್ಕೆ ಸಾರ್ವಜನಿಕರ ಹಣ: ಪ್ರಿಯಾಂಕಾ ಗಾಂಧಿ
Advertisement
ਦੇਸ਼ 19 ਨਵੰਬਰ ਨੂੰ ਸ਼੍ਰੀ ਗੁਰੂ ਨਾਨਕ ਦੇਵ ਜੀ ਦਾ ਪ੍ਰਕਾਸ਼ ਉਤਸਵ ਮਨਾਉਣ ਲਈ ਪੂਰੀ ਤਰ੍ਹਾਂ ਤਿਆਰ ਹੈ ਅਤੇ ਮੈਨੂੰ ਯਕੀਨ ਹੈ ਕਿ ਪ੍ਰਧਾਨ ਮੰਤਰੀ @narendramodi ਜੀ ਦਾ ਕਰਤਾਰਪੁਰ ਸਾਹਿਬ ਲਾਂਘਾ ਮੁੜ ਖੋਲ੍ਹਣ ਦਾ ਫੈਸਲਾ ਦੇਸ਼ ਭਰ ਵਿੱਚ ਖੁਸ਼ੀ ਅਤੇ ਉਤਸ਼ਾਹ ਵਧਾਏਗਾ।
— Amit Shah (@AmitShah) November 16, 2021
Advertisement
ಶುಕ್ರವಾರ ಸಿಖ್ ಧರ್ಮಗುರು ಗುರುನಾನಕ್ ಜಯಂತಿಗೂ ಮುನ್ನವೇ ಸರ್ಕಾರದಿಂದ ಈ ಪ್ರಕಟನೆ ಹೊರಬಿದ್ದಿದೆ. ಕೋವಿಡ್-19 ಹಿನ್ನೆಲೆ ಪಾಕಿಸ್ತಾನದ ಕರ್ತಾರ್‌ಪುರ ಕಾರಿಡಾರ್ ಅನ್ನು 2020ರ ಮಾರ್ಚ್‍ನಲ್ಲಿ ಮುಚ್ಚಲಾಯಿತು. ಆದರೆ 11 ನಾಯಕರನ್ನು ಒಳಗೊಂಡ ಪಂಜಾಬ್ ಬಿಜೆಪಿ ನಾಯಕರ ನಿಯೋಗವು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಗುರುಪೂರ್ಣಿಮೆಗೂ ಮುನ್ನ ಕರ್ತಾರ್‌ಪುರ ಕಾರಿಡಾರ್ ಅನ್ನು ಪುರ್ನ ತೆರೆಯುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆ ಇದೀಗ ಈ ನಿರ್ಧಾರ ಹೊರಬಿದ್ದಿದೆ. ಅಟ್ಟಾರಿ-ವಾಘಾ ಗಡಿಯ ಮೂಲಕ ಕರ್ತಾರ್‌ಪುರ ಗುರುದ್ವಾರಕ್ಕೆ ತೆರಳಲು ಸಿಖ್ ಯಾತ್ರಿಗಳಿಗೆ ಈಗಾಗಲೇ ಅವಕಾಶ ಕಲ್ಪಿಸಲಾಗಿದೆ.
Advertisement
It’s a happy moment that Kartarpur Corridor is reopening & prayers of Sikh community being answered. I had met PM-HM as CM & had requested them. Now they’ve announced, I thank them. Punjab cabinet will be part of the first jatha for paying obeisance on Nov 18: Punjab CM CS Channi pic.twitter.com/QHDkWVcs4D
— ANI (@ANI) November 16, 2021
ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅನ್ನು 2019ರ ನವೆಂಬರ್ 19ರಂದು ಉದ್ಘಾಟಿಸಲಾಯಿತು. ಈ ಬಾರಿ ಅದರ ಎರಡನೇ ವಾರ್ಷಿಕೋತ್ಸವವಾಗಿದ್ದು, ಗುರುನಾನಕ್ ದೇವ್ ಅವರ 550 ನೇ ಜನ್ಮ ವಾರ್ಷಿಕೋತ್ಸವಕ್ಕೂ ಮುನ್ನ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಕಾರಿಡಾರ್ ಅನ್ನು ಉದ್ಘಾಟಿಸಿದ್ದಾರೆ.
Advertisement
ಕರ್ತಾರ್‌ಪುರ ಗ್ರಾಮವು ರವಿ ನದಿಯ ಪಶ್ಚಿಮ ದಂಡೆಯಲ್ಲಿದೆ. ಇಲ್ಲಿ ಶ್ರೀ ಗುರುನಾನಕ್ ದೇವ್ ತಮ್ಮ ಜೀವನದ ಕೊನೆಯ 18 ವರ್ಷಗಳನ್ನು ಕಳೆದರು. ಗುರುದ್ವಾರ ಶ್ರೀ ಕರ್ತಾರ್ಪುರ್ ಸಾಹಿಬ್ ಪಾಕಿಸ್ತಾನದ ನರೋವಾಲ್ ಜಿಲ್ಲೆಯಲ್ಲಿ ಸುಮಾರು 4.5 ಕಿಮೀ ದೂರದಲ್ಲಿದೆ. ಇದನ್ನೂ ಓದಿ: ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್