ಅಮಿತ್ ಶಾ ಸಂಚಾರದ ವೇಳೆ ಭದ್ರತಾ ವೈಫಲ್ಯ – ವಾಹನಗಳನ್ನು ಬೆನ್ನಟ್ಟಿದ ಬೈಕರ್ಸ್

Public TV
1 Min Read
Amit Shah 1

ಬೆಂಗಳೂರು: ರಾಜ್ಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವ ಅಮಿತ್ ಶಾ (Amit Shah) ಭದ್ರತೆಯಲ್ಲಿ ವೈಫಲ್ಯ (Security Lapse) ಉಂಟಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಮಿತ್ ಶಾ ಪ್ರಯಾಣಿಸುತ್ತಿದ್ದಾಗ ಅವರ ಭದ್ರತಾ ವಾಹನಗಳನ್ನು 2 ಬೈಕರ್ಸ್‌ಗಳು ಬೆನ್ನಟ್ಟಿದ್ದಾರೆ.

ಭಾನುವಾರ ತಡರಾತ್ರಿ 11 ಗಂಟೆ ಬಿಜೆಪಿ ಕೋರ್ ಸಮಿತಿಯ ಸಭೆ ನಡೆಸಿ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಿಂದ ಹೆಚ್‌ಎಎಲ್‌ಗೆ ಅಮಿತ್ ಶಾ ತೆರಳುತ್ತಿದ್ದಾಗ ಶಫಿನ್ ಫ್ಲಾಜಾದಿಂದ ಮಣಿಪಾಲ್ ಸೆಂಟರ್ ವರೆಗೆ ಅವರ ಭದ್ರತಾ ವಾಹನಗಳ ಹಿಂದೆ 2 ಬೈಕ್‌ಗಳು ಬಂದಿವೆ. ಸುಮಾರು 300 ಮೀ. ವರೆಗೆ ಬೈಕರ್ಸ್‌ಗಳು ಭದ್ರತಾ ವಾಹನಗಳ ಜೊತೆಯೇ ಬಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ

amit shah 1

ಇಬ್ಬರು ಬೈಕರ್ಸ್‌ಗಳು ಏಕಾಏಕಿ ಭದ್ರತಾ ವಾಹನಗಳ ಹಿಂದಿನಿಂದ ಬಂದಿದ್ದು, ಸ್ವಲ್ಪ ದೂರದವರೆಗೆ ಬೆನ್ನಟ್ಟಿದ್ದಾರೆ. ತಕ್ಷಣವೇ ಭಾರತೀನಗರದ ಪೊಲೀಸರು ಬೈಕ್‌ನಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅವರಿಬ್ಬರೂ ವಿದ್ಯಾರ್ಥಿಗಳು ಎಂಬುದು ತಿಳಿದು ಬಂದಿದೆ.

ಇಬ್ಬರು ವಿದ್ಯಾರ್ಥಿಗಳು ಉದ್ದೇಶಪೂರ್ವಕವಾಗಿ ಬಂದಿಲ್ಲ ಎಂದು ತಿಳಿಸಿದ್ದಾರೆ. ತಡರಾತ್ರಿವರೆಗೂ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಿ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಮತ್ತೆ ಸ್ವರೂಪ್ Vs ಭವಾನಿ ಫೈಟ್- ಇಬ್ಬರಿಂದಲೂ ವರಿಷ್ಠರಿಗೆ ಡೆಡ್‍ಲೈನ್ ಡಿಮ್ಯಾಂಡ್

Share This Article
Leave a Comment

Leave a Reply

Your email address will not be published. Required fields are marked *