LatestMain PostNational

ಪುಲ್ವಾಮಾದಲ್ಲಿ CRPF ಯೋಧರೊಟ್ಟಿಗೆ ರಾತ್ರಿ ಕಳೆದ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಭೇಟಿ ನೀಡಿದ್ದು, ಸೋಮವಾರ ರಾತ್ರಿ CRPF ಯೋಧರೊಂದಿಗೆ ಊಟ ಸವಿದರು.

2019ರ ಫೆಬ್ರವರಿಯಲ್ಲಿ ಪಾಕಿಸ್ತಾನ ಪ್ರಾಯೋಜಿತವಾಗಿ ನಡೆದ ಪುಲ್ವಾಮಾ ದಾಳಿಯಲ್ಲಿ 40 CRPF ಯೋಧರು ಹುತಾತ್ಮರಾಗಿದ್ದರು. ಆ ಸ್ಥಳಕ್ಕೆ ಅಮಿತ್ ಶಾ ಭೇಟಿ ನೀಡಿದ್ದರು. ಅಲ್ಲದೇ ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಮೂರು ದಿನಗಳ ಭೇಟಿ ಅವಧಿಯನ್ನು ವಿಸ್ತರಿಸಿಕೊಂಡಿದ್ದಾರೆ.

ಇದೇ ವೇಳೆ ಮಾತನಾಡಿದ ಅಮಿತ್ ಶಾ ಅವರು, ಪ್ರಧಾನಿ ಮೋದಿ ಅವರ ಸರ್ಕಾರ ಭಯೋತ್ಪಾದನೆಗೆ ಶೂನ್ಯ ಸಹಿಷ್ಣು ನೀತಿಯನ್ನು ಅನುಸರಿಸುತ್ತದೆ. ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಇಲ್ಲಿನ ಶಾಂತಿ, ಕಾನೂನು ಸುವ್ಯವಸ್ಥೆ ಅಷ್ಟೇನು ತೃಪ್ತಿದಾಯಕವಾಗಿಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಕುಮಾರಸ್ವಾಮಿಯನ್ನು ಆನೆಯನ್ನಾಗಿ ಮಾಡಿದ್ದು ನಾವು: ಜಮೀರ್

ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮೊಂದಿಗೆ ಒಂದು ದಿನ ಉಳಿಯುತ್ತೇನೆ. ನಮ್ಮ ಜೀವಿತಾವಧಿಯಲ್ಲಿ ಪ್ರಧಾನಿ ಮೋದಿ ಅವರ ಆಶಯದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ನಿರ್ಮಿಸಲು ಶ್ರಮಿಸಬೇಕು ಎಂದು ಸಹ ಅಮಿತ್ ಶಾ ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಕಲ್ಲು ತೂರಾಟದಂತಹ ಘಟನಾವಳಿಗಳು ಹೆಚ್ಚಾಗಿ ನಡೆಯುತ್ತಿದ್ದವು. ಈಗ ಆ ಪ್ರಮಾಣ ಕಡಿಮೆಯಾಗಿದೆ. ಆದರೆ ಈ ಬಗ್ಗೆ ನಾವು ತೃಪ್ತರಾಗುವ ಅಗತ್ಯವಿಲ್ಲ ಎಂದು ಗೃಹ ಸಚಿವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಟವೆಲ್‍ನಲ್ಲಿ ಯಾವುದೇ ಗ್ಲಿಸರಿನ್ ಇಲ್ಲ, ನಮ್ದು ಭಾವನಾತ್ಮಕ ಕುಟುಂಬ: ಹೆಚ್‍ಡಿಕೆ

370ನೇ ವಿಧಿಯನ್ನು ಹಿಂತೆಗೆದುಕೊಂಡ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ರಕ್ತಪಾತವಾಗಿಲ್ಲ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

Back to top button