ಧಾರವಾಡ: ನಗರದಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಗುಜರಾತ್ ಮಾದರಿಯ ಫಾರೆನ್ಸಿಕ್ ಕ್ಯಾಂಪಸ್ (Forensic University Centre) ನಿರ್ಮಾಣಕ್ಕೆ ಕೊನೆಗೂ ಜಾಗ ನಿಗದಿಯಾಗಿದೆ.
Advertisement
ಧಾರವಾಡದ (Dharwad) ಕರ್ನಾಟಕ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಫಾರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಜಾಗ ಗುರುತು ಮಾಡಲಾಗಿತ್ತು. ಇದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸ್ಥಳ ಪರಿಶೀಲನೆ ಕೂಡ ನಡೆಸಿದ್ದರು. ಇದೀಗ ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಸೈದಾಪುರ ಗ್ರಾಮದ ಒಟ್ಟು 50 ಎಕರೆ 39 ಗುಂಟೆ ಜಾಗದಲ್ಲಿ ಫಾರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಜಾಗ ಗುರುತಿಸಿ ಅದೇ ಜಾಗವನ್ನು ಇದೀಗ ಫೈನಲ್ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಫಸ್ಟ್ – ವಿದ್ಯಾಕಾಶಿಯಲ್ಲಿ ಫಾರೆನ್ಸಿಕ್ ವಿವಿ, ಜ.28ಕ್ಕೆ ಶಂಕುಸ್ಥಾನೆ
Advertisement
Advertisement
ಜ.28 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಪ್ರವಾಸ ಕೈಗೊಳ್ಳಲಿದ್ದು ಈ ವೇಳೆ ಅವರು ಅಡಿಗಲ್ಲು ನೆರವೇರಿಸಲಿದ್ದಾರೆ. ಕೃಷಿ ವಿಶ್ವವಿದ್ಯಾಲಯಕ್ಕೆ ಒಳಪಡುವ ಸೈದಾಪುರ ಗ್ರಾಮದ ಜಮೀನು ವಿಧಿ ವಿಜ್ಞಾನ ಪ್ರಯೋಗಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಯೋಗ್ಯವಾಗಿದ್ದು, ಇದೇ ಜಾಗವನ್ನು ಅಂತಿಮಗೊಳಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k