ಬೆಂಗಳೂರು: ಲೋಕಸಭಾ ಚುನಾವಣೆಯ ಅಖಾಡಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಅದ್ಧೂರಿ ಎಂಟ್ರಿ ಕೊಡುತ್ತಿದ್ದಾರೆ.
ಅಮಿತ್ ಶಾ ಆಂಧ್ರ ಪ್ರದೇಶ, ಕರ್ನಾಟಕ ಹಾಗು ತಮಿಳುನಾಡಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಚಾಣಾಕ್ಯನ ಭೇಟಿಯಿಂದಾಗಿ ರಾಜ್ಯ ಬಿಜೆಪಿ ಪಾಳಯದಲ್ಲಿನ ರಾಜಕೀಯ ಚಟುವಟಿಕೆ ಗರಿಗೆದರಿದೆ.
Advertisement
ದೇವನಹಳ್ಳಿ, ಬೆಂಗಳೂರು ಹೊರವಲಯದ ರೆಸಾರ್ಟ್‍ನಲ್ಲಿ ಶಕ್ತಿಕೇಂದ್ರದ ಸಮಾವೇಶ, ಶಾಸಕರು, ಸಂಸದರ ಜೊತೆ ಸಭೆ, ಪ್ರಭಾರಿಗಳ ಜೊತೆ ಸಭೆಯಲ್ಲಿ ಭಾಗವಹಿಸಲಿದ್ದು, ಇಡೀ ದಿನ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Advertisement
Advertisement
ಈ ನಡುವೆ ಇಂದು ರಾತ್ರಿಯೇ ಬೆಂಗಳೂರಿನ ಹೊರ ವಲಯದ ರೆಸಾರ್ಟ್‍ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಆಪರೇಷನ್ ಡೀಲ್ ಆಡಿಯೋ ಆರೋಪದಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡುವ ಬಗ್ಗೆ, ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಲಿದೆ.
Advertisement
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 3.40ಕ್ಕೆ ದೇವನಹಳ್ಳಿಯ ಅವತಿಯ ಸಾಯಿ ಗಾರ್ಡನ್ ನಲ್ಲಿರುವ ಶಕ್ತಿಕೇಂದ್ರದ ಸಮಾವೇಶದಲ್ಲಿ ಭಾಗವಹಿಸಿ, ಸಂಜೆ 5.45ಕ್ಕೆ ಯಲಹಂಕದಲ್ಲಿರುವ ರೆಸಾರ್ಟ್‍ನಲ್ಲಿ ಶಾಸಕರು, ಸಂಸದರ ಸಭೆ ನಡೆಸಲಿದ್ದಾರೆ.
ಸಂಜೆ 7.15 ಕ್ಕೆ ಲೋಕಸಭಾ ಪ್ರಭಾರಿಗಳು, ಸಂಚಾಲಕರು, ವಿಸ್ತಾರಕರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರ ಸಭೆ ನಡೆಸಲಿದ್ದು, ರೆಸಾರ್ಟ್‍ನಲ್ಲಿಯೇ ರಾತ್ರಿ 9 ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ, ರೆಸಾರ್ಟ್‍ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಫೆ.22 ರಂದು ಬೆಳಗ್ಗೆ 9.30ಕ್ಕೆ ತಮಿಳುನಾಡಿನ ಮಧುರೈಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv