ಚೆನ್ನೈ: ಕೊಯಮತ್ತೂರಿನ (Coimbatore) ಪೀಲಮೇಡುವಿನಲ್ಲಿ ಹೊಸದಾಗಿ ನಿರ್ಮಿಸಲಾದ ಬಿಜೆಪಿ ಕಚೇರಿಯನ್ನು (BJP Office) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಉದ್ಘಾಟಿಸಿದರು.
ಎರಡು ದಿನಗಳ ತಮಿಳುನಾಡು (Tamil Nadu) ಭೇಟಿಗಾಗಿ ಮಂಗಳವಾರ ರಾತ್ರಿ ಕೊಯಮತ್ತೂರಿಗೆ ಆಗಮಿಸಿದ ಅಮಿತ್ ಶಾ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಹಾರಿಸಿ `ಅಮಿತ್ ಶಾ ಗೋ ಬ್ಯಾಕ್’ ಎಂದು ಘೋಷಣೆ ಕೂಗಿ ಬ್ಯಾನರ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಗುಡ್ ನ್ಯೂಸ್
ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಬಳಿಕ, ಬಿಜೆಪಿ ಕಾರ್ಯಕರ್ತರೊಂದಿಗೆ ರಾಜ್ಯ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಇದನ್ನೂ ಓದಿ: ಮೇ ತಿಂಗಳಲ್ಲಿ ರಷ್ಯಾಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ?
ಈಶ ಫೌಂಡೇಶನ್ ಆಯೋಜಿಸುತ್ತಿರುವ ಮಹಾ ಶಿವರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಇಂದು ರಾತ್ರಿ ಭಾಗವಹಿಸಲಿದ್ದಾರೆ.