– ವಿಪಕ್ಷಗಳ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧ ಎಂದ ಗೃಹಸಚಿವ
– ʻನೀಟ್ ಅಕ್ರಮ ಆರೋಪʼ – ಸದನದಲ್ಲಿ ಚರ್ಚೆ ಕೈಗೆತ್ತಿಕೊಳ್ಳುವಂತೆ ಸ್ಪೀಕರ್‌ಗೆ ಮನವಿ
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆ (Student Protests) ವೇಳೆ, ವಿದ್ಯಾರ್ಥಿಗಳ ಮೇಲೆ ಪೊಲೀಸರ ಕಠಿಣ ಕ್ರಮದ ಬಗ್ಗೆ ಸ್ಪಷ್ಟನೆ ನೀಡಬೇಕೆಂಬ ವಿಪಕ್ಷಗಳ ಒತ್ತಾಯಕ್ಕೆ ಉತ್ತರ ನೀಡಲು ಸಿದ್ಧವಿರಿವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.
ವಿದ್ಯಾರ್ಥಿ ಪ್ರತಿಭಟನೆ ನಡೆದ 20 ದಿನಗಳ ಬಳಿಕ ಸಂಸತ್ತಿನ ಆವರಣದಲ್ಲಿ ಪ್ರತ್ಯಕ್ಷರಾದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEER Paper Leak) ಹಾಗೂ ದೆಹಲಿಯ ಜಂತರ್ ಮಂತರ್ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
#WATCH | Delhi: Union Home Minister Amit Shah says, “I want to tell the Opposition: submit a letter to the Speaker by 2:00 PM, we will start the discussion at 3:00 PM, and I will provide answers to everything by 3:00 PM tomorrow. There are established rules and procedures for… pic.twitter.com/Q8ZdZfvxdW
— ANI (@ANI) August 12, 2026
ಸಂಸತ್ ಕಲಾಪದಲ್ಲಿ ನಿರಂತರ ಗದ್ದಲ ಮತ್ತು ಮುಂದೂಡಿಕೆಯ ನಡುವೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು, NEET ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಚರ್ಚೆಗೆ ಸಂಪೂರ್ಣ ಸಿದ್ಧವಿದ್ದು, ಪ್ರತಿಪಕ್ಷದ ನಾಯಕರೊಂದಿಗೆ ಸಮಾಲೋಚಿಸಿ ಚರ್ಚೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅವರು ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.
ಲೋಕಸಭೆಯ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು NEET ವಿಚಾರದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷದ ನಡುವೆ ಚರ್ಚೆಗೆ ಒಪ್ಪಿಗೆ ನೀಡಿದ್ದರು. 2026ರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ ಕುರಿತ ಚರ್ಚೆಯ ಸಂದರ್ಭದಲ್ಲಿಯೂ ಯಾವುದೇ ಪ್ರತಿಪಕ್ಷದ ಸಂಸದರು NEET ಪರೀಕ್ಷೆಗೆ ಸಂಬಂಧಿಸಿದ ವಿಷಯವನ್ನ ಸದನದಲ್ಲಿ ಪ್ರಸ್ತಾಪಿಸಿರಲಿಲ್ಲ. ಆದರೂ, ಈ ವಿಚಾರದ ಕುರಿತು ಚರ್ಚಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಶಾ ಹೇಳಿದ್ದಾರೆ.

ಚರ್ಚೆಗೆ ನಿಗದಿಪಡಿಸುವ ಸಮಯದಲ್ಲಿ ತಾವು ವೈಯಕ್ತಿಕವಾಗಿ ಸದನದಲ್ಲಿ ಹಾಜರಿದ್ದು, ಪ್ರತಿಪಕ್ಷದ ಸಂಸದರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಚರ್ಚೆ ಮತ್ತು ಸಂವಾದದ ಮೂಲಕವೇ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರಲ್ಲದೇ, ಸಂಸತ್ತು ಚರ್ಚೆ ಮತ್ತು ವಿಚಾರ ವಿನಿಮಯಕ್ಕೆ ವೇದಿಕೆಯಾಗಬೇಕು. ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಸಂಸದರು ತಮ್ಮ ಅಭಿಪ್ರಾಯಗಳನ್ನ ಮುಕ್ತವಾಗಿ ಮಂಡಿಸಲು ಅವಕಾಶ ಕಲ್ಪಿಸುವಂತೆ ಅವರು ಸ್ಪೀಕರ್‌ಗೆ ಮನವಿ ಮಾಡಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆಗಳೊಂದಿಗೆ ಮಾತನಾಡಿದ್ದ ಶಾ, ಪ್ರತಿಪಕ್ಷ ಎತ್ತಿರುವ ಎಲ್ಲ ವಿಚಾರಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿದೆ. ಪ್ರತಿಪಕ್ಷಗಳು ಲೋಕಸಭಾ ಸ್ಪೀಕರ್‌ಗೆ ಲಿಖಿತ ಮನವಿ ಸಲ್ಲಿಸಿದ್ರೆ, ಮರುದಿನ ಮಧ್ಯಾಹ್ನ 3 ಗಂಟೆಯವರೆಗೆ ಚರ್ಚೆ ಮುಂದುವರಿಸಬಹುದು. ಅಗತ್ಯವಿದ್ದರೆ ಪ್ರಶ್ನೋತ್ತರ ಅವಧಿಯನ್ನು ಕೂಡ ಅಮಾನತುಗೊಳಿಸಿ, ತಡರಾತ್ರು ವರೆಗೆ ಅಥವಾ ಮರುದಿನದ ವೆರೆಗೆ ವಿಸ್ತೃತ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ.

