ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಸಿಗಲಿದೆ. ದಕ್ಷಿಣ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ದೊಡ್ಡ ಗೆಲುವಿನತ್ತ ಸಾಗುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಭವಿಷ್ಯ ನುಡಿದಿದ್ದಾರೆ.
ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ʻಮಿಷನ್ ಸೌತ್ʼ (Mission South) ಬಗ್ಗೆ ಸುಳಿವು ನೀಡಿದ್ದಾರೆ. ಇದೇ ವೇಳೆ ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ದೊಡ್ಡಮಟ್ಟದ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು, ದೆಹಲಿ ಬಳಿಕ ಜೈಪುರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ – ಪೊಲೀಸರು ಫುಲ್ ಅಲರ್ಟ್!
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಸೇರಿ ಒಟ್ಟು 109 ಕ್ಷೇತ್ರಗಳಿವೆ. ಈ ನಾಲ್ಕು ರಾಜ್ಯುಗಳಲ್ಲಿ 2019ರಲ್ಲಿ ಬಿಜೆಪಿ 29 ಸ್ಥಾನಗಳನ್ನ ಮಾತ್ರ ಗೆದ್ದಿತ್ತು. ಕರ್ನಾಟಕದಲ್ಲಿ 25, ತೆಲಂಗಾಣದಲ್ಲಿ 4 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿ ಖಾತೆ ತೆರೆದಿರಲಿಲ್ಲ. 20 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕೇರಳದಲ್ಲಿಯೂ ಬಿಜೆಪಿ ಖಾತೆ ತೆರೆದಿಲ್ಲ. ಆದ್ರೆ ಈ ಬಾರಿ ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಳೆ ಶುಭಗಳಿಗೆಯಲ್ಲಿ ಮೋದಿ ನಾಮಪತ್ರ ಸಲ್ಲಿಕೆ – ಇಂದು ವಾರಣಾಸಿಯಲ್ಲಿ ಅದ್ಧೂರಿ ರೋಡ್ ಶೋ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು 3ನೇ ಬಾರಿಗೆ ಹೋರಾಡುತ್ತಿದೆ. ಬಿಜೆಪಿ ಏಕಾಂಗಿಯಾಗಿ 370ಕ್ಕೂ ಅಧಿಕ ಸ್ಥಾನಗಳನ್ನ ಗೆಲ್ಲುವ ಗುರಿ ಹೊಂದಿದೆ. ಒಟ್ಟಾರೆ ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಅಲ್ಲದೇ 200ಕ್ಕೂ ಹೆಚ್ಚು ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ, ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಗುಜರಾತ್ ನಲ್ಲಿಯೂ ಬಿಜೆಪಿಗೆ ಹೆಚ್ಚಿನ ಬೆಂಬಲವಿದೆ. ಇದರೊಂದಿಗೆ ಬಿಜೆಪಿ ತನ್ನ ಗುರಿ ಸಾಧಿಸಲು ದಕ್ಷಿಣ ರಾಜ್ಯಗಳ ಫಲಿತಾಂಶವೂ ಅಗತ್ಯವಿದೆ ಎಂದು ಹೇಳಿದ್ದಾರೆ.