Connect with us

Bollywood

4 ದಿನದ ನಂತ್ರ ಆಸ್ಪತ್ರೆಯಿಂದ ಬಿಗ್-ಬಿ ಡಿಸ್ಚಾರ್ಜ್

Published

on

ಮುಂಬೈ: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾಗಿ ನಾಲ್ಕು ದಿನದ ನಂತರ ಡಿಸ್ಚಾರ್ಜ್ ಆಗಿದ್ದಾರೆ.

ಶುಕ್ರವಾರ ರಾತ್ರಿ ಸುಮಾರು 9.45ಕ್ಕೆ ಅಮಿತಾಬ್ ಬಚ್ಚನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಮಿತಾಬ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ಅವರ ಮಗ, ನಟ ಅಭಿಷೇಕ್ ಬಚ್ಚನ್ ಹಾಗೂ ಪತ್ನಿ ಜಯಾ ಬಚ್ಚನ್ ಜೊತೆಯಲ್ಲಿಯೇ ಇದ್ದರು.

ಅಮಿತಾಬ್ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಅಮಿತಾಬ್ ರೂಟಿನ್ ಚೆಕಪ್‍ಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಶುಕ್ರವಾರವೇ ಅಮಿತಾಬ್ ಡಿಸ್ಚಾರ್ಜ್ ಆದ ಕಾರಣ ಅವರ ಅಭಿಮಾನಿಗಳು ಆತಂಕ ಕಡಿಮೆ ಆಗಿದೆ. ಇದನ್ನೂ ಓದಿ: ಬಾಲಿವುಡ್ ಬಿಗ್- ಬಿ ಅಮಿತಾಬ್ ಆಸ್ಪತ್ರೆಗೆ ದಾಖಲು

ಆಸ್ಪತ್ರೆ ಮೂಲಗಳ ಪ್ರಕಾರ, ಅಮಿತಾಬ್ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದರು. ಅಮಿತಾಬ್ ಆರೋಗ್ಯವಾಗಿದ್ದು, ರೆಗ್ಯೂಲರ್ ಚೆಕಪ್‍ಗಾಗಿ ಅವರು ಆಸ್ಪತ್ರೆಗೆ ಹೋಗಿದ್ದರು. ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಅಮಿತಾಬ್ ಅವರ ಆರೋಗ್ಯದ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಲಿಲ್ಲ. ಆದರೆ ಅಮಿತಾಬ್ ಅವರೇ ಮಾಧ್ಯಮಗಳ ಮುಂದೆ ಆಸ್ಪತ್ರೆಗೆ ದಾಖಲಾಗಿದ್ದು ಏಕೆ ಎಂಬುದನ್ನು ಹೇಳುತ್ತಾರೆ ಎಂದು ಹೇಳಲಾಗುತ್ತಿದೆ.