ಮುಂಬೈ: ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಮುಂಬೈನಲ್ಲಿ ಅನೇಕ ಬೆಲೆಬಾಳುವ ಆಸ್ತಿಗಳನ್ನು ಹೊಂದಿದ್ದಾರೆ. ಆದರೆ ಇತ್ತೀಚೆಗೆ ಅವರು ಗುಲ್ಮೊಹರ್ ಪಾರ್ಕ್‍ನಲ್ಲಿರುವ ತಮ್ಮ ದಕ್ಷಿಣ ದೆಹಲಿಯಲ್ಲಿರುವ ‘ಸೋಪಾನ್’ ಹೆಸರಿನ ಮನೆಯನ್ನು 23 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ.
ನೆಜೋನ್ ಗ್ರೂಪ್ ಆಫ್ ಕಂಪನಿಗಳ (ಸಿಇಒ) ಅವ್ನಿ ಬೇಡರ್ ಅವರಿಗೆ ಬಚ್ಚನ್ ಮನೆಯನ್ನು ಮಾರಾಟ ಮಾಡಿದ್ದಾರೆ. ಇದನ್ನೂ ಓದಿ: ಅಜ್ಮೀರ್ ದರ್ಗಾಕ್ಕೆ ಚಾದರ ಕಳಿಸಿಕೊಟ್ಟ ಪ್ರಧಾನಿ ಮೋದಿ
Advertisement
Advertisement
ಬಚ್ಚನ್ ಅವರು ಈ ಮನೆಯುನ್ನು ಕಟ್ಟಿಸಿ ತುಂಬಾ ವರ್ಷಗಳಾಗಿದ್ದು, ಇದು ಹಳೆಯ ನಿರ್ಮಾಣವಾಗಿದೆ. ಆದ್ದರಿಂದ ನಾವು ಸೋಪಾನ್ ಮನೆಯನ್ನು ಕೆಡವುತ್ತೇವೆ. ನಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಆ ಮನೆಯನ್ನು ಹೊಸದಾಗಿ ನಿರ್ಮಿಸುತ್ತೇವೆ. ನಾವು ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದು, ನಾನು ಹೆಚ್ಚುವರಿ ಆಸ್ತಿಗಾಗಿ ದೆಹಲಿಯಲ್ಲಿ ಒಂದು ಮನೆಯನ್ನು ಹುಡುಕುತ್ತಿದ್ದೆ. ಆಗ ಅಮಿತಾಬ್ ಅವರ ಮನೆ ಮಾರಾಟಕ್ಕಿರುವುದು ತಿಳಿದುಬಂದಿದ್ದು, ತಕ್ಷಣ ಆ ಮನೆಯನ್ನು ಖರೀದಿಸಿದ್ದೇವೆ ಎಂದು ಅವ್ನಿ ಅವರು ಮಾಧ್ಯಮದ ಮೂಲಕ ತಿಳಿಸಿದರು.
Advertisement
Advertisement
ಈ ಹಿಂದೆ ಸೋಪಾನ್ ಮನೆಯಲ್ಲಿ ಅಮಿತಾಭ್ ಬಚ್ಚನ್ ಅವರ ತಂದೆ ಪ್ರಸಿದ್ಧ ಕವಿ ಹರಿವಂಶ್ ರಾಯ್ ಬಚ್ಚನ್ ಮತ್ತು ಅವರ ತಾಯಿ ದಿವಂಗತ ತೇಜಿ ಬಚ್ಚನ್‍ರವರು ವಾಸಿಸುತ್ತಿದ್ದರು. ಇದನ್ನೂ ಓದಿ: ಶಕ್ತಿಧಾಮದ ಮಕ್ಕಳ ಜೊತೆ ಪ್ರವಾಸಕ್ಕೆ ಬಂದ ನಟ ಶಿವಣ್ಣ
ಈ ಮನೆಯು 418.5 ಚದರ ಮೀಟರ್ ಜಾಗದಲ್ಲಿದ್ದು, ಡಿಸೆಂಬರ್ 7 ರಂದು ಇದರ ನೊಂದಣಿಯನ್ನು ಪೂರ್ಣಗೊಳಿಸಲಾಗಿತ್ತು. ಹರಿವಂಶ್ ರಾಯ್ ಬಚ್ಚನ್ ಅವರು ಈ ಮನೆಯಲ್ಲಿ ವಾಸವಾಗಿದ್ದಾಗ ಕವಿಗೋಷ್ಠಿಯನ್ನು ಆಯೋಜಿಸಿದ್ದರು. ಬಚ್ಚನ್‍ರವರ ಅನೇಕ ನೆನಪುಗಳನ್ನು ಮನೆ ಹೊಂದಿದೆ. ಅಲ್ಲದೆ, ಎರಡು ಅಂತಸ್ತಿನ ಸೋಪಾನ್ ಅನ್ನು ತಾಯಿ ತೇಜಿ ಬಚ್ಚನ್ ಹೆಸರಿನಲ್ಲಿ ನೋಂದಾಯಿಸಲಾಗಿತ್ತು. ಈ ಬಗ್ಗೆ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.