Monday, 19th August 2019

Recent News

ರೈತರ ಬಳಿಕ ಪೌರ ಕಾರ್ಮಿಕರ ನೆರವಿಗೆ ಧಾವಿಸಿದ ಅಮಿತಾಭ್ ಬಚ್ಚನ್!

ಮುಂಬೈ: ಕೆಲ ದಿನಗಳ ಹಿಂದೆಯಷ್ಟೇ ರೈತರಿಗೆ ಸಹಾಯ ಹಸ್ತ ನೀಡಿದ್ದ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಈಗ ಪೌರ ಕಾರ್ಮಿಕರ ನೆರವಿಗೆ ಧಾವಿಸಿದ್ದು, 50 ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಯಂತ್ರಗಳನ್ನು ನೀಡಲು ಮುಂದಾಗಿದ್ದಾರೆ.

ಸಮಾಜದಲ್ಲಿ ಸ್ವಚ್ಛತೆಯನ್ನು ಕೈಗೊಳ್ಳುವ ಪೌರ ಕಾರ್ಮಿಕರ ಜೀವನವನ್ನು ಮತ್ತಷ್ಟು ಸುರಕ್ಷಿತವಾಗಿಸುವ ನಿಟ್ಟಿನಲ್ಲಿ ಅಮಿತಾಭ್ ಬಚ್ಚನ್ ಈ ನಿರ್ಧಾರ ಪ್ರಕಟಿಸಿದ್ದಾರೆ.

ಈ ಕುರಿತು ತಮ್ಮ ಬ್ಲಾಗ್‍ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಮಿತಾಭ್, ಮ್ಯಾನ್‍ಹೋಲ್ ಕ್ಲೀನ್ ಮಾಡುವ ವೇಳೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ಅವರ ಸಾವಿನ ಪ್ರಕರಣಗಳು ನಿಧಾನವಾಗಿ ಬೆಳಕಿಗೆ ಬರುತ್ತದೆ. ಈ ಕಾರ್ಯಕ್ಕೆ ಅವರು ಸಾಮಾನ್ಯ ವಸ್ತುಗಳನ್ನು ಬಳಸುತ್ತಾರೆ. ಅದ್ದರಿಂದ ಅವರಿಗೆ ಹೆಚ್ಚಿನ ರಕ್ಷಣೆ ಹಾಗೂ ಆಧುನಿಕ ಯಂತ್ರಗಳ ಅಗತ್ಯವಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನು ಓದಿ: 1,398 ರೈತರ ಸಾಲ ಪಾವತಿಸಿದ ಅಮಿತಾಭ್ ಬಚ್ಚನ್ 

ಕ್ಲೀನ್ ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ ವೇಳೆ ನನಗೆ ಈ ಮಾಹಿತಿ ತಿಳಿಯಿತು. ಇದರಿಂದ 50 ಸ್ಪಚ್ಛತಾ ಯಂತ್ರಗಳನ್ನು ಖರೀದಿಸಲು ನಿರ್ಧಾರ ಮಾಡಿದ್ದು, ಮ್ಯಾನ್ ಹೋಲ್‍ಗಳಿಗೆ ಇಳಿಯದೇ ಸ್ಪಚ್ಛತೆ ಮಾಡಲು ಅವರಿಗೆ ಇವು ಸಹಕಾರಿ ಆಗಲಿದೆ ಎಂದು ತಿಳಿಸಿದ್ದಾರೆ.

ತಾವು ಕೊಳ್ಳುವ ಯಂತ್ರಗಳ ಬಗ್ಗೆಯೂ ಮಾಹಿತಿ ನೀಡಿರುವ ಅಮಿತಾಭ್, ಕಾರ್ಯನಿರ್ವಹಿಸಲು ಸುಲಭವಿರುವ ಹಾಗೂ ಸೂಕ್ತ ಗಾತ್ರದ ಯಂತ್ರಗಳನ್ನು ಖರೀದಿ ಮಾಡಲಾಗುವುದು. ಈ ಕುರಿತು ಸ್ಥಳೀಯ ಮಹಾನಗರ ಪಾಲಿಕೆಗೆ ಎರಡು ದಿನಗಳಲ್ಲಿ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Leave a Reply

Your email address will not be published. Required fields are marked *