ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ರಣತಂತ್ರ ರೂಪಿಸುತ್ತಿದ್ದು, ಮೇ ಮೊದಲ ವಾರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಟಾರ್ಗೆಟ್ ಕರ್ನಾಟಕಕ್ಕೆ ಅಮಿತ್ ಷಾ ಮಾಸ್ಟರ್ ಪ್ಲಾನ್ ರೂಪಿಸಿದ್ದು, 150 ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
Advertisement
ಮೊದಲು ಗೆಲ್ಲುವ 150 ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಅಮಿತ್ ಷಾ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿತ್ ಷಾ ಮತ್ತು ತಂಡ ಚುನಾವಣಾ ಪೂರ್ವ ಸಮೀಕ್ಷೆ ನಡೆಸಲಿದ್ದಾರೆ. ನಿಖರ ಸಮಿಕ್ಷೆಗೋಸ್ಕರ ಅಮಿತ್ ಷಾ ಪರಿಣಿತರ ತಂಡ ರಚಿಸಲಿದ್ದಾರೆ. ಷಾ ಜೊತೆಯೇ ಸಮೀಕ್ಷಾ ತಂಡ ರಾಜ್ಯಕ್ಕೆ ಆಗಮಿಸಲಿದೆ. ಆರ್‍ಎಸ್‍ಎಸ್ ಮುಖಂಡರಿಂದಲೂ ಅಮಿತ್ ಷಾ ವರದಿ ಪಡೆಯಲಿದ್ದಾರೆ ಎನ್ನಲಾಗಿದೆ.
Advertisement
ಈಗಾಗಲೇ 150 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಎಂಬ ವದಂತಿಯನ್ನು ತಳ್ಳಿಹಾಕಿದ್ದ ಬಿಜೆಪಿ, ಈವರೆಗೂ ಯಾವುದೇ ಜಿಲ್ಲೆಯಲ್ಲಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿಲ್ಲ ಎಂದು ಪ್ರಕಟಣೆ ನೀಡುವ ಮೂಲಕ ಸ್ಪಷ್ಟಪಡಿಸಿತ್ತು.
Advertisement
ಬಿಜೆಪಿ ಸ್ಪಷ್ಟಿಕರಣ… pic.twitter.com/lJCO4Vk92u
— BJP Karnataka (@BJP4Karnataka) April 4, 2017