ಮಂಗಳೂರು: ರಾಜ್ಯದ ಕರಾವಳಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಭದ್ರಕೋಟೆಯಾಗಿರುವ ಕರಾವಳಿ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರೋದೇ ಸರ್ಕಾರಕ್ಕೆ ವರದಾನ. ಹೀಗಾಗಿ ಈ ಕ್ಷೇತ್ರಗಳ ಹೊಡೆದುರುಳಿಸಲು ಬಿಜೆಪಿಯೂ ನಾನಾ ಸರ್ಕಸ್ ಮಾಡುತ್ತಿದೆ. ಅದರ ಭಾಗ ಎಂಬಂತೆ ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಆ ಚುನಾವಣೆಯಲ್ಲಿ ಬಿಜೆಪಿಯ ಆಂತರಿಕ ಕಲಹ, ಬಿಜೆಪಿಯ ಓವರ್ ಕಾನ್ಪಿಡೆಂಟ್ ಸೋಲಿಗೆ ಮುಳುವಾಗಿತ್ತು. ಹೀಗಾಗಿ ಈ ಬಾರಿ ಶತಾಯಗತಾಯ ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ ಪ್ರಯತ್ನ ಪಡುತ್ತಿದೆ.
Advertisement
ಬಿಜೆಪಿಯ ಹೈಕಮಾಂಡ್ ಈ ಬಾರಿ ಸ್ವತಃ ರಣರಂಗಕ್ಕೆ ಇಳಿಯಲು ತಯಾರಿ ನಡೆಸಿದೆ. ಅದರ ಮೊದಲ ಪ್ರಯತ್ನವಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಇಂದು ಆಗಮಿಸುತ್ತಿದ್ದಾರೆ.
Advertisement
ಅಕ್ಟೋಬರ್ 4ರ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಮಿತ್ ಶಾ ಪ್ರವಾಸ ಮಾಡಲಿದ್ದಾರೆ. ಅಕ್ಟೋಬರ್ 4 ರಂದು ಇಡೀ ದಿನ ಮಂಗಳೂರಿನಲ್ಲಿ ಪಕ್ಷ ಸಂಘಟನೆ ಹಾಗೂ ಇತರ ವಿಷಯಗಳ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಒಟ್ಟಿನಲ್ಲಿ ಕರಾವಳಿ ವಶಕ್ಕೆ ಅಮಿತ್ ಶಾ ರಣೋತ್ಸಾದಲ್ಲಿ ಬರುತ್ತಿದ್ದಾರೆ.