– ಒಂದು ಸಹಿ ಹಾಕೋಕೆ ಬಂದು ಪ್ರಾಣಾನೇ ಹೋಯಿತು!
ಗಾಂಧೀನಗರ: ಲಂಡನ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ರಂಜಿತಾ ಅವರು ಅಹಮದಾಬಾದ್ ವಿಮಾನ ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ.
ರಂಜಿತಾ ಗೋಪಕುಮಾರನ್ ಅವರು ಕೇರಳದ ಪತ್ತನಂತಿಟ್ಟ ಜಿಲ್ಲೆಯವರು. ಯುನೈಟೆಡ್ ಕಿಂಗ್‌ಡಂನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮನೆ ನಿರ್ಮಾಣದ ಮೇಲ್ವಿಚಾರಣೆಗಾಗಿ ರಜೆ ಮೇಲೆ ಕೇರಳಕ್ಕೆ ಬಂದಿದ್ದರು. ರಜೆ ಮುಗಿಸಿ ವಾಪಸ್ ಆಗುವಾಗ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕನಸಿನ ಮನೆಗೆ ಕಾಲಿಡುವ ಮೊದಲೇ ನರ್ಸ್ ರಂಜಿತಾ ಸಾವಿನ ಮನೆ ಸೇರಿದ್ದಾರೆ. ಪತ್ತನಂತಿಟ್ಟ ಜಿಲ್ಲಾಧಿಕಾರಿ ಪ್ರೇಮ್ ಕೃಷ್ಣನ್ ಎಸ್. ಹಾಗೂ ರಂಜಿತಾ ಈ ವಿಮಾನದಲ್ಲಿದ್ದರು. ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ ಅವರ ಸಾವು ದೃಢಪಟ್ಟಿದೆ. ಇದನ್ನೂ ಓದಿ: ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ
42 ವರ್ಷದ ರಂಜಿತಾ ಪತಿ ವಿನೀಶ್, ಇಬ್ಬರು ಶಾಲಾ ಮಕ್ಕಳಾದ ರಿತಿಕಾ ಮತ್ತು ಇಂದುಚೂಡನ್ ಹಾಗೂ ತಾಯಿ ತುಳಸಿ ಅವರನ್ನು ಅಗಲಿದ್ದಾರೆ. ಪಂಚಾಯತ್ ಸದಸ್ಯ ಜಾನ್ಸನ್ ಥಾಮಸ್, ರಂಜಿತಾ ಮೂರು ದಿನಗಳ ಹಿಂದೆ ಯುಕೆಯಿಂದ ಮನೆಗೆ ಬಂದಿದ್ದರು. ಅವರಿಗೆ ರಾಜ್ಯ ಆರೋಗ್ಯ ಸೇವೆಯಲ್ಲಿ ನರ್ಸ್ ಕೆಲಸ ಸಿಕ್ಕಿತ್ತು. ಆದರೆ ಅವರ ಹೊಸ ಮನೆಯ ನಿರ್ಮಾಣದ ಮೇಲ್ವಿಚಾರಣೆಗಾಗಿ ರಜೆಯ ಮೇಲೆ ಮನೆಗೆ ಬಂದಿದ್ದರು. ಅವರು ಸುಮಾರು ಒಂದು ವರ್ಷದ ಹಿಂದೆ ಯುಕೆಗೆ ತೆರಳಿದಾಗಿನಿಂದ, ಅಲ್ಲಿ ತಮ್ಮ ಕೆಲಸದ ಒಪ್ಪಂದವನ್ನು ಪೂರ್ಣಗೊಳಿಸಲು ಬಯಸುತ್ತಿದ್ದರು. ಕೇರಳಕ್ಕೆ ಮರಳಲು ಮತ್ತು ರಾಜ್ಯ ಆರೋಗ್ಯ ಸೇವೆಯೊಂದಿಗೆ ಕೆಲಸ ಮಾಡಲು ಯೋಜಿಸಿದ್ದರು ಎಂದು ತಿಳಿಸಿದ್ದಾರೆ.
ಯುಕೆಗೆ ತೆರಳುವ ಮೊದಲು, ರಂಜಿತಾ ಎಂಟು ವರ್ಷಗಳ ಕಾಲ ಒಮಾನ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡಿದ್ದರು. ಅವರ ಪತಿ ಕೂಡ ಒಮಾನ್‌ನಲ್ಲಿದ್ದರು. ಆದರೆ ನಂತರ ಕೇರಳಕ್ಕೆ ಮರಳಿದರು. ಅದಾದ ಬಳಿಕ ರಂಜಿತಾ ಯುಕೆಗೆ ತೆರಳಿದ್ದರು. ಇದನ್ನೂ ಓದಿ: ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ
ನಿನ್ನೆ ಇಬ್ಬರು ಮಕ್ಕಳನ್ನ ಸ್ಕೂಲ್‌ಗೆ ಕಳುಹಿಸಿ ಲಂಡನ್‌ಗೆ ಹೊರಟ್ಟಿದ್ದರು. ಜುಲೈನಲ್ಲಿ ಹೊಸ ಮನೆಯಲ್ಲಿ ಬದುಕು ಕಟ್ಟಲು ಕನಸು ಕಂಡಿದ್ದರು. ಈಗಾಗಲೇ ಮನೆಯ ಬಹುತೇಕ ಕೆಲಸ ಪೂರ್ಣಗೊಂಡಿತ್ತು. ಜುಲೈನಲ್ಲಿ ಗೃಹಪ್ರವೇಶದ ಪ್ಲ್ಯಾನ್ ಮಾಡಿಕೊಂಡಿದ್ದರು. ಮನೆಗೆ ಆಸರೆಯಾಗಿದ್ದ ರಂಜಿತಾ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.