ಬೀದರ್ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ 15 ಎಕರೆ ಕಬ್ಬು ಬೆಂಕಿಗಾಹುತಿ

1 Min Read

ಬೀದರ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ( Sugarcane Crop Fire) 15 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾದ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಓತಗಿ ಗ್ರಾಮದಲ್ಲಿ ನಡೆದಿದೆ.

ಬರಗಾಲದ ನಡುವೆ ಕಷ್ಟಪಟ್ಟು ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಗ್ರಾಮದ ರೈತ ಗೋವಿಂದ ಬೀರಪ್ಪ ಅವರಿಗೆ ಸೇರಿದ ಕಬ್ಬಿನ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ವೇಗವಾಗಿ ಹರಡಿದ ಪರಿಣಾಮ ಕಬ್ಬಿನ ಬೆಳೆ ಧಗಧಗನೆ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ ಕಬ್ಬು ಸುಟ್ಟು ಭಸ್ಮವಾಗಿತ್ತು.

ಸ್ಥಳಕ್ಕೆ ಶಾಸಕ ಸಿದ್ದು ಪಾಟೀಲ್ ಭೇಟಿ
ಘಟನೆಯ ಮಾಹಿತಿ ತಿಳಿದ ಶಾಸಕ ಸಿದ್ದು ಪಾಟೀಲ್ ಅವರು ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ, ರೈತನಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಇದನ್ನೂ ಓದಿ: ಕೊಡಗಿನಲ್ಲಿ ಮಳೆಯ ಆರ್ಭಟ – ಹಾರಂಗಿ ಜಲಾಶಯಕ್ಕೆ 2,812 ಕ್ಯೂಸೆಕ್ ಒಳಹರಿವು

ಜೆಸ್ಕಾಂ ಅಧಿಕಾರಿಗಳಿಗೂ ಕರೆ ಮಾಡಿದ ಶಾಸಕ ಸಿದ್ದು ಪಾಟೀಲ್ ಅವರು, ಜೋತುಬಿದ್ದಿರುವ ವಿದ್ಯುತ್ ತಂತಿಗಳನ್ನು ದುರಸ್ತಿ ಮಾಡುವಂತೆ ಸೂಚಿಸಿದರು. ಅಲ್ಲದೆ, ಬೆಂಕಿಯಿಂದ ಭಾಗಶಃ ಉಳಿದಿರುವ ಕಬ್ಬನ್ನು ಕಟಾವು ಮಾಡಿ ಸಾಗಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸೂಚನೆ ನೀಡಿದರು.ಇದನ್ನೂ ಓದಿ: ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

Share This Article
Exit mobile version