ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿರುವ ಬೆನ್ನಲ್ಲೇ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅಮೃತ್ ಪೌಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನಿಯೋಜಿಸಿದೆ. ಇದನ್ನೂ ಓದಿ: ಪ್ರತಿ ಹಗರಣಗಳ ಬುಡ ಅಗೆದಾಗ, ಅದರ ಬೇರುಗಳು ಕೆಪಿಸಿಸಿ ಕಚೇರಿಯನ್ನು ತಲುಪುತ್ತಿದೆ: ಬಿಜೆಪಿ
Advertisement
Advertisement
545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಈಚೆಗೆ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಬಗ್ಗೆ ಅಮೃತ್ ಪೌಲ್ ಅವರಿಗೆ ದೂರುಗಳು ಬಂದಿದ್ದವು. ಆದರೆ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದವು.
Advertisement
ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವರ್ಗಾಯಿಸಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಪುಂಡರ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಕ್ಕೆ ಪ್ಲ್ಯಾನ್