ಚಂಡೀಗಢ: ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಅಮೃತ್ಪಾಲ್ ಸಿಂಗ್ (Amritpal Singh) ಪತ್ನಿ ಕಿರಣ್‍ದೀಪ್ ಕೌರ್ (Kirandeep Kaur) ಲಂಡನ್‍ಗೆ ತೆರಳಲು ಪ್ರಯತ್ನಿಸುತ್ತಿದ್ದಾಗ ಅಮೃತಸರ ವಿಮಾನ ನಿಲ್ದಾಣದಲ್ಲಿ (Amritsar Airport) ವಶಕ್ಕೆ ಪಡೆಯಲಾಗಿದೆ.
ಕಿರಣ್‍ದೀಪ್‍ಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪಂಜಾಬ್ ಪೊಲೀಸ್ ಮೂಲಗಳ ಪ್ರಕಾರ, ಕಿರಣ್ ದೀಪ್ ಇಂಗ್ಲೆಂಡ್‍ನ ಪ್ರಜೆಯಾಗಿದ್ದಾಳೆ. ಅಷ್ಟೇ ಅಲ್ಲದೇ ಪಂಜಾಬ್ ಹಾಗೂ ದೇಶದ ಯಾವುದೇ ಭಾಗದಲ್ಲಿ ಯಾವುದೇ ಪ್ರಕರಣವು ದಾಖಲಾಗಿಲ್ಲ.
ಆದರೆ ತಲೆಮರೆಸಿಕೊಂಡಿರುವ ಆರೋಪಿಗಳ ಕುಟುಂಬ ಮತ್ತು ಪರಿಚಯಸ್ಥರನ್ನು ವಿಚಾರಣೆಗೆ ಒಳಪಡಿಸಿದ ಕಾನೂನು ಪ್ರಕ್ರಿಯೆಯ ಅಡಿಯಲ್ಲಿ ಕಿರಣ್‍ದೀಪ್ ಕೌರ್‌ನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ. ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಅಮೃತ್ಪಾಲ್ ಸಿಂಗ್ ತಲೆಮರೆಸಿಕೊಂಡಿದ್ದಾನೆ. ಇದನ್ನೂ ಓದಿ: ದಿಢೀರ್ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ
ಈ ಹಿಂದೆ, ಮಾರ್ಚ್‍ನಲ್ಲಿ ಅಮೃತ್‌ಪಾಲ್ ಸಿಂಗ್‍ನ ದೇಶದ್ರೋಹಿ ಚಟುವಟಿಕೆಗಳಿಗೆ ವಿದೇಶಿ ಧನಸಹಾಯ ನಡೆದಿರುವ ಬಗ್ಗೆ ಅಲ್ಲಿನ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಇದಕ್ಕೆ ಸಂಬಂಧಿಸಿದಂತೆ ಪಂಜಾಬ್‍ನ ಜಲ್ಲುಪುರ್ ಖೇಡಾ ಗ್ರಾಮದಲ್ಲಿ ಆಕೆಯನ್ನು ಪ್ರಶ್ನಿಸಲಾಗಿತ್ತು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಯಿಂದ ಮತದಾರರಿಗೆ ಹಣ ಹಂಚಿಕೆ ಆರೋಪ – 1.54 ಕೋಟಿ ರೂ. ಜಪ್ತಿ