ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಹಾಗೂ ಜಗದೀಶ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಮೂಲ್ಯರ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲಾಗಿದೆ. ಇದೀಗ ಸ್ಯಾಂಎಲ್ವುಡ್ ತಾರೆಯರು ಅಮೂಲ್ಯ ಸೀಮಂತ ಪಾರ್ಟಿ ಮಾಡಿದ್ದಾರೆ. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- Advertisement 2
ಅಮೂಲ್ಯರ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ಮನೆಯವರಲ್ಲೇ ಸೇರಿ ಮಾಡಿದ್ದರು. ಆ ಕಾರ್ಯಕ್ರಮದ ನಂತರ ಅಮೂಲ್ಯ ಸ್ನೇಹಿತರು ಸೇರಿ ಸಹ ಒಂದು ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಇದರಲ್ಲಿ ನಟಿಯರಾದ ರಮ್ಯಾ, ಭಾರತಿ ವಿಷ್ಣುವರ್ಧನ್, ಸುಧಾರಾಣಿ, ರಾಧಿಕಾ ಪಂಡಿತ್, ಶ್ರುತಿ, ಮಾಳವಿಕಾ ಅವಿನಾಶ್, ಗಣೇಶ್ ಮುಂತಾದರು ಭಾಗವಹಿಸಿದ್ದಾರೆ. ಈ ಫೋಟೋಗಳನ್ನು ಅಮೂಲ್ಯ ಅವರು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಧರ್ಮ ಮುಖ್ಯ ಎಂದು ಪರೀಕ್ಷೆಯನ್ನೇ ಬಹಿಷ್ಕರಿಸಿದ ಶಿವಮೊಗ್ಗ ವಿದ್ಯಾರ್ಥಿನಿಯರು
- Advertisement 3
View this post on Instagram
- Advertisement 4
ಪಾರ್ಟಿಯನ್ನು ಬೆಂಗಳೂರಿನ ರೆಸಾರ್ಟ್ ಒಂದರಲ್ಲಿ ಆಯೋಜಿಸಲಾಗಿತ್ತು, ರಂಗು ರಂಗಿನಿಂದ ಕೂಡಿದ್ದ ಈ ಕಾರ್ಯಕ್ರಮ ಎಲ್ಲರ ಗಮನ ಸೆಳೆದಿದೆ. ಅಮೂಲ್ಯ ಲೈಟ್ ಪಿಂಕ್ ಬಣ್ಣದ ಗೌನ್ ಧರಿಸಿ ಮಿಂಚಿದ್ದಾರೆ. ವಿಭಿನ್ನ ಥೀಮ್ನಲ್ಲಿ ನಡೆದ ಈ ಪಾರ್ಟಿಯಲ್ಲಿ ಹಲವಾರು ಗಣ್ಯರು ಭಾಗವಹಿಸಿ, ಅಮೂಲ್ಯಗೆ ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ತುಂಬು ಗರ್ಭಿಣಿ ಅಮೂಲ್ಯಗೆ ವಿಧ-ವಿಧವಾದ ಗಿಫ್ಟ್ಗಳನ್ನು ನೀಡಿ, ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಕಂದಮ್ಮನ ಆಗಮನಕ್ಕಾಗಿ ಕಾಯ್ತಿದ್ದೇನೆ- ಅಮೂಲ್ಯಗೆ ಹರಿಪ್ರಿಯಾ ವಿಶ್
View this post on Instagram
ಅಮೂಲ್ಯ 2017ರಲ್ಲಿ ಜಗದೀಶ್ ಅವರ ಜೊತೆ ಸಪ್ತಪದಿ ತುಳಿದಿದ್ದರು. ಅಮೂಲ್ಯ ಜಗದೀಶ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತು ಸುದ್ದಿಯನ್ನು ಅಭಿಮಾನಿಗಳಿಗೆ ಇನ್ಸ್ಟಾಗ್ರಾಂ ಮೂಲಕ ತಿಳಿಸಿದ್ದರು.