ಬೆಂಗಳೂರು: ನಾನೇನು ಕ್ರೈಂ ಮಾಡಿದ್ದೀನಾ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ಅಮೂಲ್ಯಾ ಲಿಯೋನಾ ಪೊಲೀಸರಿಗೆ ಮರುಪ್ರಶ್ನೆ ಮಾಡಿದ್ದಾಳೆ.
ಪಾಕಿಸ್ತಾನ ಪರ ಘೋಷಣೆ ಕೂಗಿ ಪೊಲೀಸ್ ವಶದಲ್ಲಿರುವ ಅಮೂಲ್ಯಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬುಧವಾರ ಬೆಳಗ್ಗೆಯಿಂದ ಆರೋಪಿ ಅಮೂಲ್ಯಾಳನ್ನು ಪೊಲೀಸರು ತೀವ್ರ ವಿಚಾರಣೆ ಮಾಡುತ್ತಿದ್ದಾರೆ. ಈ ವೇಳೆ ಆರೋಪಿ ಪೊಲೀಸರಿಗೆ ಮರುಪ್ರಶ್ನೆ ಮಾಡುತ್ತಿದ್ದು, ನಾನೇನು ಕ್ರೈಂ ಮಾಡಿದ್ದೀನಾ ನಿಮ್ಮ ಕೆಲಸವನ್ನು ನೀವು ಮಾಡಿ ಎಂದು ಉತ್ತರ ನೀಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.
Advertisement
Advertisement
ಅಷ್ಟೇ ಅಲ್ಲ ಆರೋಪಿ ಅಮೂಲ್ಯ ಪೊಲೀಸ್ ಠಾಣೆಯನ್ನು ಅರಮನೆಯನ್ನಾಗಿ ಮಾಡಿಕೊಂಡಿದ್ದು, ಬೆಳಗ್ಗೆ ಎಂಟು ಗಂಟೆಗೆ ಎದ್ದಿದ್ದಾಳೆ. ಸದ್ಯ ಆರೋಪಿ ಅಮೂಲ್ಯ ಲಿಯೋನಾಳನ್ನು ವಿಚಾರಣೆ ನಡೆಸಲಾಗುತ್ತಿದೆ.
Advertisement
ಫ್ರೀಡಂ ಪಾರ್ಕಿನಲ್ಲಿ ನಡೆದ ಸಿಎಎ, ಎನ್‍ಆರ್ ಸಿ ವಿರುದ್ಧದ ಪ್ರತಿಭಟನಾ ಸಭೆಯಲ್ಲಿ ಅಮೂಲ್ಯ ಲಿಯೋನಾ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿ ದೇಶದ್ರೋಹದ ಆರೋಪದಡಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಪರಪ್ಪನ ಅಗ್ರಹಾರ ಸೇರಿದ್ದಳು. ಅಮೂಲ್ಯ ಲಿಯೋನಾಳನ್ನು ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದ್ದು, ಹೀಗಾಗಿ ಮಂಗಳವಾರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಐದು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಅಲ್ಲದೆ ಆರೋಪಿ ಅಮೂಲ್ಯಾ ವಾಸವಿದ್ದ ಪಿ.ಜಿ.ಯನ್ನು ಪೊಲೀಸರು ಮಂಗಳವಾರ ರಾತ್ರಿ ಸ್ಪಾಟ್ ಮಹಜರು ಮಾಡಿದ್ದಾರೆ.