ಕೆಆರ್‌ಎಸ್ ಬಳಿ ಮನರಂಜನಾ ಪಾರ್ಕ್ ಕಾಮಗಾರಿ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Public TV
1 Min Read
KRS Brindavan 3

ಬೆಂಗಳೂರು: ಕೆಆರ್‌ಎಸ್‌ (KRS) ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮಕ್ಕೆ (Cauvery Neeravari Nigama) ಹೈಕೋರ್ಟ್ (High Court) ನೋಟಿಸ್ ನೀಡಿದೆ.

ಕಾವೇರಿ ಆರತಿಗೆ (Kaveri Aarti) ನಿರ್ಮಾಣ ಕಾಮಗಾರಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್, ಡ್ಯಾಮ್ ಸುರಕ್ಷತಾ ಸಮಿತಿಗೂ ನೋಟಿಸ್ ನೀಡಿದೆ. ಕಾಮಗಾರಿಗೆ ಯಂತ್ರಗಳನ್ನು ಉಪಯೋಗಿಸಿರುವ ಫೋಟೋಗಳನ್ನು ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್ ಸಲ್ಲಿಸಿದರು. ಇದನ್ನೂ ಓದಿ: ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ

ಡ್ಯಾಮ್ ಬಳಿ 120 ಅಡಿಯ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ. ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ. ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ. ಮನರಂಜನಾ ಪಾರ್ಕ್ ಟೆಂಡರ್ ಪೂರ್ಣಗೊಂಡಿಲ್ಲವೆಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರು.

ಕಾಮಗಾರಿಗೆ ಅಗೆಯುವುದರಿಂದ ಡ್ಯಾಮ್‍ಗೆ ಹಾನಿಯಾಗುವುದಿಲ್ಲವೇ? ಡ್ಯಾಮ್ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ ಎಂದು ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನಿಸಿತು.

ಈ ಬಗ್ಗೆ 2 ವಾರದಲ್ಲಿ ಪ್ರತಿಕ್ರಿಯಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತರಿಂದ ಫುಲ್ ಟರ್ಮ್ ಸಿಎಂ ಗೇಮ್ ಚಾಲೂ: ಸಿಎಂ ಸಮರ್ಥನೆ, ಜಾರಿಕೊಂಡ ಡಿಸಿಎಂ, ಅಸಲಿ ಕಹಾನಿ ಏನು!?

Share This Article