ಗದಗ: ಲಾರಿ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ದಾರುಣ ಘಟನೆ ಗದಗ (Gadaga) ಜಿಲ್ಲೆ ನರಗುಂದ (Naragunda) ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.
ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಮೃತ ದಂಪತಿ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾ ಗಾಯಾಳುಗಳು ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: MUDA Case: ಇಂದು ಮೈಸೂರು ‘ಲೋಕಾ’ ಕಚೇರಿಯಲ್ಲಿ ಸಿಎಂ ವಿಚಾರಣೆ
ಮೃತ ಕುಟುಂಬಸ್ಥರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಲಾರಿ ಹುಬ್ಬಳ್ಳಿ ಕಡೆಗೆ ಹೊರಟಿತ್ತು, ಕಾರು ಬಾಗಲಕೋಟೆಗೆ ಹೊರಟಿತ್ತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನಕ್ಕೆಂದು ಹೋದವರು ಶಾಶ್ವತವಾಗಿ ದೇವರ ಪಾದ ಸೇರಿದ್ದಾರೆ. ಮಕ್ಕಳು ಅನಾಥರಾಗಿದ್ದು ನಿಜಕ್ಕೂ ದುರಂತವೆ ಸರಿ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಡ್ರೈ ಪೋರ್ಟ್ ಎಂದರೇನು? ಬಿಹಾರದಲ್ಲಿ ಅದರ ಅವಶ್ಯಕತೆ ಏನಿತ್ತು?