ಬೆಂಗಳೂರು: ತನ್ನ ಬಾಯ್ ಫ್ರೆಂಡ್ (BoyFriend) ನೋಡಲು ದುಬೈನಿಂದ ಬಂದಿದ್ದ ಗಗನಸಖಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೋರಮಂಗಲ (Koramangala) ದಲ್ಲಿ ನಡೆದಿದೆ.
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕೋರಮಂಗಲ 8ನೇ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಯುವತಿಯನ್ನು ಅರ್ಚನಾ (28) ಎಂದು ಗುರತಿಸಲಾಗಿದೆ. ರೇಣುಕಾ ರೆಸಿಡೆನ್ಸಿಯ 4ನೇ ಮಹಡಿಯಿಂದ ಬಿದ್ದು ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ನಾಲ್ಕು ದಿನಗಳ ಹಿಂದಷ್ಟೇ ಈಕೆ ಬೆಂಗಳೂರಿಗೆ ಬಂದಿದ್ದಳು. ಶುಕ್ರವಾರ ರಾತ್ರಿ ಇಬ್ಬರ ಮಧ್ಯೆ ಗಲಾಟೆ ನಡೆದಿದೆ ಎಂಬ ಮಾಹಿತಿ ಸಿಕ್ಕಿದ್ದು, ಯುವಕನೇ ಮೇಲಿಂದ ತಳ್ಳಿರೋ ಸಾಧ್ಯತೆ ಇದೆ ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಬಾಯ್ ಪ್ರೇಂಡ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದು, ಈ ಬಗ್ಗೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಆರೋಗ್ಯ ಸ್ಥಿತಿ ಗಂಭೀರ
ಗಗನಸಖಿಯಾಗಿದ್ದ ಅರ್ಚನಾ: ಪ್ರತಿಷ್ಠಿತ ಏರ್ಲೈನ್ಸ್ನಲ್ಲಿ ಗಗನಸಖಿಯಾಗಿರುವ ಅರ್ಚನಾ ಧೀಮನ್ ದುಬೈನಿಂದ ತನ್ನ ಗೆಳೆಯ ಆದೇಶ್ ಭೇಟಿಗೆ ಬಂದಿದ್ದಳು. ಕೇರಳ ಮೂಲದ ಆದೇಶ್, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಕೆಲವು ವರ್ಷಗಳಿಂದ ಇಬ್ಬರು ಪ್ರೀತಿಸ್ತಿದ್ದ ಬಗ್ಗೆ ಮಾಹಿತಿ ಇದೆ.