Dakshina KannadaDistrictsKarnatakaLatestMain Post

ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ಪ್ರಾಚೀನ ಕಾಲದ ದೇವಸ್ಥಾನ ಪತ್ತೆ

ಮಂಗಳೂರು: ನವೀಕರಣ ಮಾಡಲೆಂದು ಮಸೀದಿ ಕೆಡವಿದಾಗ ಅದರಲ್ಲಿ ಪ್ರಾಚೀನ ಕಾಲದ ದೇವಸ್ಥಾನ ಪತ್ತೆಯಾಗಿದೆ. ಈ ಘಟನೆ ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ನಡೆದಿದೆ.

ಮಳಲಿಯ ಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದ ನವೀಕರಣದ ಸಲುವಾಗಿ ಅದರ ಮುಂಭಾಗವನ್ನು ಕೆಡವಲಾಗಿತ್ತು. ದರ್ಗಾದ ಹಿಂಭಾಗ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿವೆ. ಜೈನ ಅಥವಾ ಹಿಂದೂ ಧರ್ಮಕ್ಕೆ ಸೇರಿದ ದೇವಸ್ಥಾನವಿರೋ ಸಾಧ್ಯತೆ ಇದೆ.

ಮಾಹಿತಿ ತಿಳಿದು ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್ ಪುರಂದರ ಭೇಟಿ ನೀಡಿದ್ದಾರೆ. ಇದೇ ವೇಳೆ ವಿಶ್ವಹಿಂದೂ ಪರಿಷತ್ ಪ್ರಮುಖರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಭೇಟಿ ಕೊಟ್ಟಿದ್ದಾರೆ. ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕಲು ತಹಶೀಲ್ದಾರ್ ಮುಂದಾಗಿದ್ದಾರೆ.

ಸದ್ಯ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಅದರಂತೆ ದರ್ಗಾ ಆಡಳಿತ ಮಂಡಳಿ ಕೂಡ ಕೆಲಸ ಸ್ಥಗಿತಗೊಳಿಸಿ ಜಿಲ್ಲಾಡಳಿತದ ನಡೆಗೆ ಸಮ್ಮತಿ ಸೂಚಿಸಿದೆ. ಇದನ್ನೂ ಓದಿ: ಪೂಜೆ ವೇಳೆ ಶಬ್ದ ಮಾಲಿನ್ಯ ಆರೋಪ- ವೇಣುಗೋಪಾಲ ದೇಗುಲಕ್ಕೆ ನೊಟೀಸ್

Leave a Reply

Your email address will not be published.

Back to top button