– ಜಿಲ್ಲಾ ಉಸ್ತುವಾರಿ ಸಚಿವರ ಆಪ್ತರಿಂದಲೇ ದಂಧೆ ಆರೋಪ
ಯಾದಗಿರಿ: ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ಮಾರಾಟದ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಅಕ್ರಮ ಪಡಿತರ ಸಾಗಾಟ ತಡೆಯಲು ಹೋದ ಯುವಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪವೊಂದು ಕೇಳಿಬಂದಿದೆ.
ಯಾದಗಿರಿ (Yadagiri) ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಬೆಂಬಲಿಗರು ಹಲ್ಲೆಗೆ ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ತನ್ನ ಮೇಲೆ ದಂಧೆಕೋರರು ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಸುರಪುರದ ಸಚಿನ್ ನಾಯಕ್ ಈ ಆರೋಪ ಮಾಡಿದ್ದಾರೆ.
Advertisement
Advertisement
ಸಚಿವರ ಆಪ್ತರೇ ಅಕ್ಕಿ ದಂಧೆ ನಡೆಸ್ತಿದ್ದಾರೆ ಅನ್ನೋ ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ದಂಧೆ ತಡೆಯಲು ಹೋದಾಗ ಓರ್ವ ಸಚಿವರ ಆಪ್ತ ವಿಜಯ್ ರಾಠೋಡ್ ಹಾಗೂ ಮತ್ತೋರ್ವ ಆಪ್ತ ಮಲ್ಲಿಕ್ ಸಾಬ್ ಎಂಬಾತನ ಸಹೋದರ ಅಕ್ಬರ್ ಸಾಬ್ ಎಂಬವರಿಂದ ಹಲ್ಲೆಗೆ ಯತ್ನ ನಡೆದಿದೆ. ಸಚಿವ ಶರಣಬಸಪ್ಪ ದರ್ಶನಾಪೂರ ಆಪ್ತ ನಲ್ಲಿಕ್ ಸಾಬ್ ಎನ್ನುವಾತನೇ ಅಕ್ರಮ ಪಡಿತರ ದಂಧೆಯ ಕಿಂಗ್ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
Advertisement
ಅಕ್ಕಿ ಸಾಗಾಟದ ಬಗ್ಗೆ ಪೊಲೀಸರಿಗೆ ಕರೆ ಮಾಡಿದ್ರೂ ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ಮಾಡಿದ್ದಾರೆ. ಇದಕ್ಕೆಲ್ಲಾ ಪೊಲೀಸ್ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಕುಮ್ಮಕ್ಕಿದೆ ಎಂದು ಯುವಕ ಆರೋಪಿಸಿದ್ದಾನೆ. ಇದನ್ನೂ ಓದಿ: ಪ್ರಶ್ನೆಗಾಗಿ ಹಣ ಪಡೆದ ಆರೋಪ – ಮಹುವಾ ಮೊಯಿತ್ರಾ ಮನೆಯಲ್ಲಿ ಸಿಬಿಐ ಶೋಧ