ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಸೈಬರ್ ವಂಚನೆಗಳಿಂದ (Cyber Fraud) ಭಾರತೀಯರು 25,000 ಕೋಟಿ ರೂ. ಕಳೆದುಕೊಂಡಿದ್ದಾರೆ. ಇದು ಸಿಕ್ಕಿಂನ ವಾರ್ಷಿಕ ಬಜೆಟ್‌ಗಿಂತ ದ್ವಿಗುಣವಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ.
ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಗೃಹ ಸಚಿವಾಲಯ ಮತ್ತು ಅಧಿಕಾರಿಗಳು WhatsApp , MeitY, Instagram ಮತ್ತು Googleನಂತಹ ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳೊಂದಿಗೆ ಈ ಕಳವಳ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಜೂ.24ಕ್ಕೆ ಮುಂದೂಡಿಕೆ
ಕಳೆದ ವರ್ಷವೊಂದರಲ್ಲೇ ಪ್ರತಿದಿನ ಸರಾಸರಿ 27 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ. ಜನವರಿ 2024 ರಿಂದ ಜೂನ್ 2024 ರವರೆಗೆ ಕೇಂದ್ರ ಸೈಬರ್ ವಂಚನೆ ಏಜೆನ್ಸಿಯು 709 ದೂರುಗಳನ್ನು ಸ್ವೀಕರಿಸಿದೆ. ಇದರಲ್ಲಿ ಒಬ್ಬೊಬ್ಬರು ಸಂತ್ರಸ್ತರು 1 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ಈ ಅವಧಿಯಲ್ಲಿ ಒಟ್ಟು 1,421 ಕೋಟಿ ರೂ. ಹಣವನ್ನು ಜನರು ವಂಚನೆಯಿಂದ ಕಳೆದುಕೊಂಡಿದ್ದಾರೆ ಎಂದು ಡೇಟಾ ಬಹಿರಂಗಪಡಿಸಿದೆ. ಇದನ್ನೂ ಓದಿ: ಯಾರೇ ಸ್ಟೇ ತಂದಿದ್ರೂ ತೆರವು ಮಾಡ್ತೀವಿ- ದರ್ಶನ್ ಮನೆ ತೆರವು ಬಗ್ಗೆ ಡಿಕೆಶಿ ರಿಯಾಕ್ಷನ್
ಎಲ್ಲಾ ಕಂಪನಿಗಳು ಆರಂಭಿಕ ಹಂತದಲ್ಲಿಯೂ ಸಹ ವಿವಿಧ ರೀತಿಯ ವಿವರಗಳನ್ನು ಕೇಳುತ್ತವೆ. ಇದು ಸೈಬರ್ ವಂಚನೆಯನ್ನು ತಡೆಯುವ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತದೆ. ವಂಚಕರು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಆಂಪ್ಲಿಫೈಯರ್‌ಗಳಾಗಿ ಬಳಸುತ್ತಿದ್ದಾರೆ. ಇದರಲ್ಲಿ ವಂಚಕರು ಸುಲಭವಾಗಿ ಜನರನ್ನು ಬಲಿಪಶುಗಳನ್ನಾಗಿ ಮಾಡುತ್ತಿದ್ದಾರೆ ಎಂದು ಸಭೆಯಲ್ಲಿ ಭಾಗಿಯಾಗಿದ್ದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್
ಏಮ್ಸ್, ಐಸಿಎಮ್‌ಆರ್ ಸೈಬರ್ ದಾಳಿಯಿಂದ ಸಾಲ ನೀಡುವ ಅಪ್ಲಿಕೇಶನ್ ವಂಚನೆಗಳವರೆಗೆ ರಾಷ್ಟ್ರೀಯ ಸೈಬರ್ ಅಪರಾಧ ಪೋರ್ಟಲ್ (NCRP) 2020 ರಿಂದ ಫೆಬ್ರವರಿ 2024ರ ನಡುವೆ 31 ಲಕ್ಷ ದೂರುಗಳನ್ನು ಸ್ವೀಕರಿಸಿದೆ. ಕೇಂದ್ರ ಸರ್ಕಾರದ ಅಧಿಕೃತ ಸಂವಹನದ ಪ್ರಕಾರ, ಸೈಬರ್ ವಂಚನೆ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಬಂಧನವಾಗುತ್ತಿರುವ ಹಿನ್ನೆಲೆ ಈ ಬೆಳವಣಿಗೆ ಹೆಚ್ಚುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ
ವಿವಿಧ ಕಾನೂನು ಜಾರಿ ಸಂಸ್ಥೆಗಳು ದಾಖಲಾದ ಪ್ರಕರಣಗಳು ಅಥವಾ ಎಫ್‌ಐಆರ್‌ಗಳು 66,000 ಕ್ಕಿಂತ ಹೆಚ್ಚಿವೆ. ಆದರೆ ಈ ವರ್ಷದವರೆಗೆ ಕೇವಲ 500 ಪ್ರಕರಣಗಳಲ್ಲಿ ಬಂಧನವಾಗಿದೆ. ಈ ಮೂಲಕ 1% ವಂಚಕರ ಬಂಧನವಾಗಿರುವುದು ಈ ಬೆಳವಣಿಗೆಗೆ ಕಾರಣವಾಗಿದೆ. ಸಾಲದ ಆ್ಯಪ್‌ಗಳು, ಪೊಂಜಿ ಸ್ಕೀಮ್‌ಗಳು ಮತ್ತು ಸ್ಟಾಕ್ ಟ್ರೇಡಿಂಗ್ ಗ್ರೂಪ್‌ಗಳಲ್ಲಿ ನಕಲಿ ಜಾಹೀರಾತುಗಳನ್ನು ಪೂರ್ವಭಾವಿಯಾಗಿ ಪತ್ತೆಹಚ್ಚಲು ಮತ್ತು ಅದರ ವಿರುದ್ಧ ಕ್ರಮ ಕೈಗೊಳ್ಳಲು ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ರೀಲ್ಸ್‌ಗಾಗಿ ಡ್ರೈವಿಂಗ್ ಮಾಡಲು ಹೋಗಿ ಆಕ್ಸಿಲರೇಟರ್ ಒತ್ತಿದ ಯುವತಿ- ಮುಂದೇನಾಯ್ತು..?