– ಸಚಿವ ಮಹದೇವಪ್ಪ ಎದುರೇ ವಿತ್ತ ಸಚಿವರಿಗೆ ದೂರು
ಮೈಸೂರು: ಗ್ಯಾರಂಟಿಗಳ (Guarantee) ಹೆಸರಲ್ಲಿ ರಾಜ್ಯ ಸರ್ಕಾರ ಕರ್ನಾಟಕವನ್ನು ಲೂಟಿ ಹೊಡೀತಿದೆ.. ರಕ್ಷಣೆ ಮಾಡಿ ಅಂತ ವ್ಯಕ್ತಿಯೊಬ್ಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitharaman) ಅವರಿಗೆ ಮನವಿ ಮಾಡಿದ್ದಾರೆ. ಸಚಿವ ಹೆಚ್.ಸಿ ಮಹದೇವಪ್ಪ ಅವರೂ ವೇದಿಕೆಯಲ್ಲಿದ್ದಾಗಲೇ ಮಧ್ಯ ಪ್ರವೇಶಿಸಿ, ದೂರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
`ಸಂಗೀತ ಸುಗಂಧ’ ಕಾರ್ಯಕ್ರಮದಲ್ಲಿ ದಿಢೀರ್ ವೇದಿಕೆ ಬಳಿಕ ನುಗ್ಗಿದ ವ್ಯಕ್ತಿಯೊಬ್ಬ ಘೋಷಣೆ ಕೂಗಿದರು. ತಾಯಿ ಚಾಮುಂಡಿಗೆ ಹೂ ಹಾಕಿ ಲೂಟಿ ಹೊಡೆಯುತ್ತಿದ್ದಾರೆ. ನೀವು ಮಹಾರಾಷ್ಟ್ರ ಚುನಾವಣೆಯಲ್ಲಿ (Maharashtra Election) ದಯಮಾಡಿ ಉಚಿತ ಗ್ಯಾರಂಟಿ ಯೋಜನೆ ಘೋಷಣೆ ಮಾಡಬೇಡಿ ಎಂದು ಕೋರಿದ್ದಾರೆ. ಇದನ್ನೂ ಓದಿ: ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ವಯನಾಡಿನಲ್ಲಿ ಸ್ಪರ್ಧೆ – ಪಿಣರಾಯಿ ವಿಜಯನ್
ಈ ವೇಳೆ, ಕಾರ್ಯಕ್ರಮದಲ್ಲಿದ್ದ ಗಣ್ಯರೆಲ್ಲ ತಬ್ಬಿಬ್ಬಾಗಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಭಾಗಿಯಾಗಿದ್ದು, ತೀವ್ರ ಮುಜುಗರ ಅನುಭವಿಸಿದರು. ಘೋಷಣೆ ಕೂಗಿದ ವ್ಯಕ್ತಿಯನ್ನು ಪೊಲೀಸರು ಎಳೆದೊಯ್ದರು. ಬಳಿಕ ವ್ಯಕ್ತಿಯನ್ನು ಬಿಟ್ಟುಬಿಡಿ ಅಂತ ನಿರ್ಮಲಾ ಸೀತಾರಾಮನ್ ಸೂಚಿಸಿದರು. ಇದನ್ನೂ ಓದಿ: ಕರಾಟೆ ತರಗತಿಯಲ್ಲಿ ‘ವಿದ್ಯಾಪತಿ’ಯ ತಲೆ ಹರಟೆ-ನಾಗಭೂಷಣ್ ಸಿನಿಮಾ ಹಾಡಿಗೆ ಧ್ವನಿಯಾದ ಜಗ್ಗೇಶ್
ಸಚಿವರಿಗೆ ದೂರು ನೀಡಿದ ವ್ಯಕ್ತಿಯನ್ನು ಕೆಆರ್ ನಗರ ತಾಲೂಕಿನ ಶುದ್ದನಹಳ್ಳಿ ಗ್ರಾಮದ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಈತ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ
ಇನ್ನೂ ಕಾರ್ಯಕ್ರಮ ಮುಗಿಸಿ ಹೊರಡುತ್ತಿದ್ದ ವೇಳೆ ರೈತ ಮುಖಂಡರು ವಿತ್ತ ಸಚಿವರಿಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು. ಕೃಷಿ ಸಾಲಕ್ಕೆ ರೈತರ ಸಿಬಿಲ್ ಸ್ಕೋರ್ ಪರಿಗಣಿಸುವ ನಿಯಮ ರದ್ದು ಮಾಡಬೇಕು. ಕೃಷಿ ಸಾಲ ವಸೂಲಿಗೆ ಬ್ಯಾಂಕುಗಳು ರೈತರ ಜಮೀನು ಮುಟ್ಟುಗೂಲು ಹಾಕಿ ಹರಾಜು ಮಾಡುವ ಸರ್ಫೈಸಿ ಕಾಯ್ದೆ ರದ್ದು ಮಾಡಬೇಕು. ಮಹಿಳಾ ಸ್ವಸಹಾಯ ಸಂಘಗಳಿಗೆ ಖಾಸಗಿ ಫೈನಾನ್ಸ್ ಗಳು ವಸುಲಾತಿ ಕಿರುಕುಳ ನೀಡುತ್ತಿರುವುದಕ್ಕೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ತರಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ಮನವಿ ಸಲ್ಲಿಸಿದರು. ಮನವಿಗೆ ಸ್ವೀಕರಿಸಿದ ವಿತ್ತ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.